ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಅನಿರೀಕ್ಷಿತವಾಗಿ ಆಗಮಿಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಆದಿಹಳ್ಳಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಸತಿ ಶಾಲೆಗೆ ಅನಿರೀಕ್ಷಿತವಾಗಿ ಆಗಮಿಸಿದ ಅವರು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.
ದ್ವಿತೀಯ ಪಿಯುಸಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದಲ್ಲಿ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.ಶಾಲೆಯ ಗಣಕಯಂತ್ರ ಕೊಠಡಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕು ಎಂಬ ಕನಸನ್ನು ಹೊಂದಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಕನಸು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಸಿಬಿಎಸ್ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವಂತೆ ಪ್ರೋತ್ಸಾಹಿಸಿದರು.ಈ ಸಂದರ್ಭದಲ್ಲಿ ಇಲಾಖೆ ಮಂಡ್ಯ ಉಪವಿಭಾಗದ ತಾಲೂಕು ವಿಸ್ತರಣಾಧಿಕಾರಿ ರುದ್ರೇಶ್, ವಸತಿ ಶಾಲೆ ಪ್ರಾಂಶುಪಾಲ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
ಜ.2ರಂದು ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಆಚರಣೆಮಂಡ್ಯ: ನಗರದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಭೀಮ ಪಡೆ ಜಿಲ್ಲಾ ಸಮಿತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಯಿತು.
ಪಡೆಯ ರಾಜ್ಯಾಧ್ಯಕ್ಷ ಸತ್ಯಾನಂದ ಮಾತನಾಡಿ, ಸಮಗ್ರ ಸಂವಿಧಾನ ಜಾರಿಯಿಂದ ಹಂತ ಹಂತವಾಗಿ ಮಾನವ ಹಕ್ಕುಗಳು ಮತ್ತು ಕರ್ತವ್ಯಗಳು ಹಾಗೂ ಉಲ್ಲಂಘನೆ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದೆ ಎಂದರು.ಭೀಮ ಪಡೆಯು ರಾಜ್ಯಾದ್ಯಂತ ತನ್ನದೇ ಆದ ಧ್ಯೇಯ ಮತ್ತು ಸಿದ್ಧಾಂತ ಇರಿಸಿಕೊಂಡು ನಡೆಯುತ್ತಿದೆ. ಜ. 2ರಂದು ವಿದ್ಯದಾತ ಮಹಾತ್ಮ ಜ್ಯೋತಿ ಬಾ ಫುಲೆ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ನಿತ್ಯಾನಂದ, ಜಿಲ್ಲಾ ಉಪಾಧ್ಯಕ್ಷ ಸುಧಾಮ, ಪದಾಧಿಕಾರಿಗಳಾದ ವೈರ್ಮುಡಿ, ಮಂಗಳ, ಸರೋಜಿನಿ ಸೇರಿದಂತೆ ಹಲವಾರು ಹಾಜರಿದ್ದರು.