ನಗರ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ ವಿಜಯ್ ಶಂಕರ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ನಗರ ವ್ಯಾಪ್ತಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ ವಿಜಯ್ ಶಂಕರ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ವಸತಿ ನಿಲಯದಲ್ಲಿರುವ ಕುಡಿಯುವ ನೀರಿನ ವ್ಯವಸ್ಥೆ, ಅಡುಗೆ ಕೋಣೆಯ ಸ್ವಚ್ಛತೆ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಶೌಚಾಲಯಗಳ ಶುಚಿತ್ವ, ಅನುಗುಣವಾಗಿ ಆಹಾರ ವಿತರಣೆ, ವಿದ್ಯುತ್ ಸಂಪರ್ಕ, ಗ್ರಂಥಾಲಯ ಹಾಗೂ ಪುಸ್ತಕಗಳ ಲಭ್ಯತೆ ಸೇರಿದಂತೆ ವಿವಿಧ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಅಡುಗೆ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಡುಗೆ ತಯಾರಿಸುವ ಮುನ್ನ ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆಯಬೇಕು. ಅಡುಗೆ ಕೋಣೆಯನ್ನು ಶುಚಿತ್ವದಿಂದ ಕಾಪಾಡಿಕೊಳ್ಳಬೇಕು. ದಾಸ್ತಾನು ರಿಜಿಸ್ಟರ್‌ಗಳನ್ನು ಜಿ.ಪಂ. ಕಚೇರಿಗೆ ತೆಗೆದುಕೊಂಡು ಬರುವಂತೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಿಎಒ ಅವರು ಅಡ್ ಹಾಕ್ ಸಮಿತಿ ಸಭೆಗೆ ಹಾಜರಾಗಿ ಕಚೇರಿಯ ಆಕ್ಷೇಪಣೆ ಮತ್ತು ವಸಲಾತಿ ಬಗ್ಗೆ ಸಂಪೂರ್ಣ ದಾಖಲಾತಿಗಳನ್ನು ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸಹಾಯಕ ನಿರ್ದೇಶಕ ಯಂಕಪ್ಪ, ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಲಿಂಗಪ್ಪ ಅಂಗಡಿ ಸೇರಿದಂತೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮೇಲ್ವಿಚಾರಕರು ಭಾಗವಹಿಸಿದ್ದರು.