ಮೇಲ್ಮನೆ: ಹೊರಟ್ಟಿ ಸ್ಥಾನಕ್ಕೆ ರೇಸಲ್ಲಿ ಹರಿ, ಬೋಸರಾಜುನಾಲ್ವರ ನಾಮನಿರ್ದೇಶನದೊಂದಿಗೆ ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದ ಹೊಸ್ತಿಲಿಗೆ ಬಂದ ಬೆನ್ನಲ್ಲೇ, ಸಭಾಪತಿ ಸ್ಥಾನ ಹಿರಿಯ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅಥವಾ ಹಾಲಿ ಸಭಾನಾಯಕ ಎನ್.ಎಸ್. ಬೋಸರಾಜು ಪೈಕಿ ಒಬ್ಬರಿಗೆ ಒಲಿಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.