ಉಗ್ರ ಕಸಬ್ ಪರ ಕಾಂಗ್ರೆಸ್ಸಿಗನ ಹೇಳಿಕೆಗೆ ತರೂರ್ ಬೆಂಬಲ 2008ರಲ್ಲಿ 26/11 ಮುಂಬೈ ದಾಳಿ ವೇಳೆ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಬಲಿಯಾಗಿದ್ದು ಉಗ್ರ ಕಸಬ್ ಗುಂಡಿಗಲ್ಲ, ಬದಲಿಗೆ ಆರ್ಎಸ್ಎಸ್ ನಂಟಿನ ಪೊಲೀಸರಿಗೆ ಎಂಬ ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷ ನಾಯಕ ವಿಜಯ್ ವಡೆಟ್ಟಿವಾರ್ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲಿಸಿದ್ದಾರೆ.