ಕಾವೇರಿ ಕಿಚ್ಚು: ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ.
KannadaprabhaNewsNetwork | Published : Nov 03 2023, 12:30 AM IST
ಕಾವೇರಿ ಕಿಚ್ಚು: ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ.
ಸಾರಾಂಶ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 51 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 51 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಕಣ್ಣಿಗೆ ಪಟ್ಟಿಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 51ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕುರುಡಾಗಿದೆ. ಕಣ್ಣಿದ್ದರೆ ಕರ್ನಾಟಕಕ್ಕೆ ನಿಜವಾಗಲೂ ನ್ಯಾಯ ದೊರಕುತ್ತಿತ್ತು. ಆದರೆ ಕಾವೇರಿ ನಿರ್ವಹಣಾ ಮಂಡಳಿ ಕಣ್ಣಿಗೆ ಬಟ್ಟಿಯನ್ನು ಕಟ್ಟಿಕೊಂಡು ತೀರ್ಪನ್ನು ಕೊಡುತ್ತಿದೆ ಎಂದು ಆರೋಪಿಸಿ ನಾವೆಲ್ಲರೂ ಕಣ್ಣಿಗೆ ಬಟ್ಟಿಕಟ್ಟಿಕೊಂಡು ಒಂದು ವಿನೂತನ ಪ್ರತಿಭಟನೆ ನಡೆಸಿದ್ದೇವೆ ಎಂದರು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಚಾ.ವೆಂ.ರಾಜ್ ಗೋಪಾಲ್, ಸೋಮವಾರಪೇಟೆ ಮಂಜು, ನಂಜುಂಡಸ್ವಾಮಿ, ಲಿಂಗರಾಜು, ಚಾ.ಹ.ರಾಮು, ಗು.ಪುರುಷೋತ್ತಮ್, ವೀರಭದ್ರ, ತಾಂಡವಮೂರ್ತಿ, ರಾಜಪ್ಪ, ಮೂಡ್ಲುಪುರಪ್ರಕಾಶ್ ಹಾಗೂ ಇತರರು ಹಾಜರಿದ್ದರು. --------- 2ಸಿಎಚ್‌ಎನ್7: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಣ್ಣಿಗೆ ಕಪ್ಪುಪಟ್ಟಿಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. --------