ದಾಸರಹಳ್ಳಿ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ 1 ಲಕ್ಷ ಮತ: ಶಾಸಕ

| Published : Apr 21 2024, 02:18 AM IST / Updated: Apr 21 2024, 06:03 AM IST

ದಾಸರಹಳ್ಳಿ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ 1 ಲಕ್ಷ ಮತ: ಶಾಸಕ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾದ ಶೋಭಾ ಕರಂದ್ಲಾಜೆ ಅವರಿಗೆ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮತವನ್ನು ನೀಡಿ ಅವರನ್ನು ಜಯಶೀಲರನ್ನಾಗಿ ಮಾಡಬೇಕು ಎಂದು ಶಾಸಕ ಎಸ್.ಮುನಿರಾಜು ಮನವಿ ಮಾಡಿದರು.

ಪೀಣ್ಯ ದಾಸರಹಳ್ಳಿ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾದ ಶೋಭಾ ಕರಂದ್ಲಾಜೆ ಅವರಿಗೆ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮತವನ್ನು ನೀಡಿ ಅವರನ್ನು ಜಯಶೀಲರನ್ನಾಗಿ ಮಾಡಬೇಕು ಎಂದು ಶಾಸಕ ಎಸ್.ಮುನಿರಾಜು ಮನವಿ ಮಾಡಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಶೆಟ್ಟಿಹಳ್ಳಿಯಲ್ಲಿನ ಚಿಕ್ಕಸಂದ್ರದ ಸುಂದರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಮನೆಮನೆ ಮತ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕ್ಷೇತ್ರದಾದ್ಯಂತ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಧಾನಸಭಾ ಚುನಾವಣೆಗಿಂತ ಹೆಚ್ಚಿನ ಮತವನ್ನು ಲೋಕಸಭೆ ಚುನಾವಣೆಯಲ್ಲಿ ಪಡೆಯಲಿದ್ದೇವೆ ಎಂದರು.

ಶೆಟ್ಟಿಹಳ್ಳಿ ವಾರ್ಡ್ ಅಧ್ಯಕ್ಷ ಶೆಟ್ಟಿಹಳ್ಳಿ ಸುರೇಶ್, ಬಿಜೆಪಿ ಹಿರಿಯ ಮುಖಂಡರಾದ ದಯಾನಂದ ಬಿ.ಕೃಷ್ಣಕುಮಾರ್ ಇನ್ನೂ ಮುಂತಾದ ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.