ಸವದತ್ತಿ ಕ್ಷೇತ್ರ ₹230 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಎಚ್‌ಕೆಪಿ

| N/A | Published : Aug 23 2025, 09:47 AM IST

Savadatti

ಸಾರಾಂಶ

ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ವರ್ಷಕ್ಕೆ 1.30 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸಲು 230 ಕೋಟಿ ರು.ವೆಚ್ಚದ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

 ವಿಧಾನಪರಿಷತ್: ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ವರ್ಷಕ್ಕೆ 1.30 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸಲು 230 ಕೋಟಿ ರು.ವೆಚ್ಚದ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. 

ಶುಕ್ರವಾರ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ ವಿಧೇಯಕ ಮಂಡಿಸಿ ಮಾತನಾಡಿ, ಈ ಯೋಜನೆ 2026 ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪ್ರವಾಸೋದ್ಯಮ ತಾಣ ಅಭಿವೃದ್ಧಿಪಡಿಸಲಾಗುವುದು. ಒಟ್ಟು 11 ಕಡೆ ರೋಪ್ ವೇ (ಕೇಬಲ್ ಕಾರ್) ಅಳವಡಿಕೆ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಗದಗದಲ್ಲಿರುವ ಕಪ್ಪತಗುಡ್ಡಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿದ ಪರಿಣಾಮ ಭಾನುವಾರ ಒಂದೇ ದಿನ 4 ಲಕ್ಷ ಪಾರ್ಕಿಂಗ್ ಮತ್ತು ಪ್ರವೇಶ ಶುಲ್ಕದಿಂದ ಬರುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಎಂದರೆ ಸಮುದ್ರಗಳು, ರೆಸ್ಟೋರೆಂಟ್‌ಗಳು ಅಭಿವೃದ್ಧಿಪಡಿಸುವುದಲ್ಲ ಎಂದು ಹೇಳಿದರು.

Read more Articles on