ಸಾರಾಂಶ
- ತೆಲಂಗಾಂಣ ರೀತಿ ದೇಶವ್ಯಾಪಿ ಜಾತಿಗಣತಿ- ಮೀಸಲಿನ ಮಿತಿ ರದ್ದು, ಖಾಸಗೀಲು ಮೀಸಲು
---ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಒಬಿಸಿ ಸಲಹಾ ಸಮಿತಿಯ ಸಭೆ
ಒಬಿಸಿ ಸಮುದಾಯವನ್ನು ವಿಶ್ವಾಸಕ್ಕೆ ಪಡೆವ, ಅವರಿಗೆ ಬಲತುಂಬಲು ನಿರ್ಧಾರವಿವಿಧ ವಿಷಯಗಳಲ್ಲಿ ರಾಜ್ಯ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಒಮ್ಮತ
ಜು.25ಕ್ಕೆ ದಿಲ್ಲಿಯಲ್ಲಿ ಒಬಿಸಿ ನಾಯಕತ್ವ ಭಾಗೀದಾರ ನ್ಯಾಯ ಸಮ್ಮೇಳನ ಘೋಷಣೆ--
ಕನ್ನಡಪ್ರಭ ವಾರ್ತೆ ಬೆಂಗಳೂರುಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಆಧಾರಿತ ಜನಗಣತಿಗೆ ತೆಲಂಗಾಣ ಮಾದರಿ ಅನುಸರಿಸುವುದು, ಶಿಕ್ಷಣ, ರಾಜಕೀಯ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಶೇ.50ರಿಂದ 75ಕ್ಕೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ, ಎಲ್ಲ ರಾಜ್ಯಗಳ ರಾಜಧಾನಿಯಲ್ಲಿ ರ್‍ಯಾಲಿ ನಡೆಸುವುದು ಸೇರಿ ಇನ್ನಿತರ ವಿಷಯಗಳ ಕುರಿತು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಖಾಸಗಿ ಹೋಟೆಲ್‌ನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಎರಡನೇ ದಿನದ ಸಭೆಯಲ್ಲಿ ಒಬಿಸಿ ಸಮುದಾಯದವನ್ನು ಒಗ್ಗೂಡಿಸುವುದು, ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಅವರಿಗೆ ಬಲ ತುಂಬುವ ಕುರಿತು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಮೇಲೆ ಯಾವೆಲ್ಲ ವಿಚಾರಗಳ ಕುರಿತು ಒತ್ತಡ ಹೇರಬೇಕು ಎಂಬ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ ಒಬಿಸಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮತ್ತು ಅವರಿಗೆ ಶಕ್ತಿ ತುಂಬುವಂತಹ ವಿಷಯಗಳ ಕುರಿತು ನಿರ್ಣಯಿಸಲಾಯಿತು.