ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿ ಸಚಿವೆ ಅತಿಶಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿ ಸಚಿವೆ ಅತಿಶಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ನಾಯಕರು ಎಎಪಿ ನಾಯಕರನ್ನು ಕೊಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದು, ಇದಕ್ಕೆ ಸೂಕ್ತ ಪುರಾವೆಗಳು ನೀಡದ ಕಾರಣ ಅತಿಶಿಗೆ ಸಮನ್ಸ್‌ ಜಾರಿ ಮಾಡಿದ ನ್ಯಾಯಾಲ ಮೇ 29ರಂದು ಹಾಜರಾಗುವಂತೆ ಸೂಚಿಸಿದೆ. ಈ ವಿಚಾರದಲ್ಲಿ ದೆಹಲಿ ಮುಖ್ಯಮಂತ್ರಿಗೆ ಸಮನ್ಸ್ ನೀಡಲು ನಿರಾಕರಿಸಿದೆ.

ಸಿಎಂ ಕೇಜ್ರಿವಾಲ್‌ಗೆ ಕ್ಯಾನ್ಸರ್‌,ಕಿಡ್ನಿ ಹಾನಿ ಆತಂಕ: ಬೇಲ್‌ ಅರ್ಜಿ ವಿಚಾರಣೆ ಸಿಜೆಐಗೆನವದೆಹಲಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ತಾವು ಕ್ಯಾನ್ಸರ್‌ ಮತ್ತು ಮೂತ್ರಪಿಂಡದ ಹಾನಿಯ ಗಂಭೀರ ಆತಂಕ ಎದುರಿಸುತ್ತಿರುವುದಾಗಿ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ತಮಗೆ ನೀಡಿರುವ ಜಾಮೀನು ಸ್ತರಣೆ ಕೋರಿ ಕೇಜ್ರಿ ಸಲ್ಲಿಸಿರುವ ಅರ್ಜಿಯಲ್ಲಿ, ನನ್ನ ದೇಹದ ತೂಕದಲ್ಲಿ ದಿಢೀರ್‌ ಇಳಿಕೆಯಾಗಿದೆ. ರಕ್ತದಲ್ಲಿನ ಹೆಚ್ಚಿನ ಕಿಟೋನ್‌ ಪತ್ತೆಯಾಗಿದೆ. ಇದು ಮೂತ್ರಪಿಂಡದ ಹಾನಿ ಮತ್ತು ಕ್ಯಾನ್ಸರ್ನ ಸಂಭವನೀಯತೆ ತೋರಿಸುತ್ತದೆ. ಹೀಗಾಗಿ ಈ ಕುರಿತು ಉನ್ನತ ಪರೀಕ್ಷೆಗೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಾಮೀನು ವಿಸ್ತರಣೆ ಮಾಡಬೇಕು ಎಂದು ಕೋರಿದ್ದಾರೆ. ಈ ನಡುವೆ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಕೋರ್ಟ್‌ನ ಜೆ.ಕೆ. ಮಹೇಶ್ವರಿ ಮತ್ತು ಕೆ.ಎಸ್. ವಿಶ್ವನಾಥನ್ ಅವರಿದ್ದ ಬುಧವಾರ ನಿರಾಕರಿಸಿದೆ. ಜೊತೆಗೆ ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಪರಿಶೀಲಿಸಲಿದ್ದಾರೆ ಎಂದು ಹೇಳಿದೆ.