ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಕೆಲವು ಯುವಕರು ಕಪಾಳಮೋಕ್ಷ ಮಾಡಿದ ಘಟನೆ ಜೈಪುರದ ಶಹೀದ್ ಸ್ಮಾರಕದಲ್ಲಿ ಸೋಮವಾರ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಶ್ನಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು
ಜೈಪುರ: ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಕೆಲವು ಯುವಕರು ಕಪಾಳಮೋಕ್ಷ ಮಾಡಿದ ಘಟನೆ ಜೈಪುರದ ಶಹೀದ್ ಸ್ಮಾರಕದಲ್ಲಿ ಸೋಮವಾರ ನಡೆದಿದೆ.
ಸಿಜೆಪಿ ಪ್ರತಿಭಟನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಶ್ನಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ದೀಪ್ಕೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸುತ್ತಿದ್ದಾಗ ಅವರ ಬೆಂಬಲಿಗರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಾಗುತ್ತಿದ್ದರು.
ಗುಂಪಿನಲ್ಲಿದ್ದ ಕೆಲವು ಯುವಕರು ಕಪಾಳಮೋಕ್ಷ
ಆಗ ಗುಂಪಿನಲ್ಲಿದ್ದ ಕೆಲವು ಯುವಕರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಮರುಕ್ಷಣ ಆರೋಪಿಗಳ ಮೇಲೆ ದೀಪ್ಕೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ, ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
