ಸಾರಾಂಶ
ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರದ ಆಯೋಜಿಸಿದ್ದ ‘ವಿಜಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ನಗರ ಮತ್ತು ಗ್ರಾಮಾಂತರ ಮಂಡಲ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೇಮಕಗೊಂಡಿರುವ 400ಕ್ಕೂ ಹೆಚ್ಚು ನೂತನ ಪದಾಧಿಕಾರಿಗಳಿಗೆ ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.
ಕನ್ನಡಪ್ರಭ ವಾರ್ತೆ ಬ್ಯಾಟರಾಯನಪುರ
ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರದ ಆಯೋಜಿಸಿದ್ದ ‘ವಿಜಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ನಗರ ಮತ್ತು ಗ್ರಾಮಾಂತರ ಮಂಡಲ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೇಮಕಗೊಂಡಿರುವ 400ಕ್ಕೂ ಹೆಚ್ಚು ನೂತನ ಪದಾಧಿಕಾರಿಗಳಿಗೆ ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಟರಾಯನಪುರ ಬಿಜೆಪಿ ವತಿಯಿಂದ ಜಕ್ಕೂರು ಏರೋಡ್ರಮ್ ಸಮೀಪದ ಖಾಸಗಿ ಕನ್ವೆನ್ಷನ್ ಸೆಂಟರ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಸದಾನಂದಗೌಡ, ಪಕ್ಷದಲ್ಲೇ ಇದ್ದುಕೊಂಡು ಪಕ್ಷದ್ರೋಹದ ಚಟುವಟಿಕೆಯಲ್ಲಿ ತೊಡಗುವ ವ್ಯಕ್ತಿಗಳಿಗೆ ಪಕ್ಷದ ಯಾವುದೇ ಹುದ್ದೆ ನೀಡದಂತೆ ಕ್ರಮ ವಹಿಸಬೇಕು ಮತ್ತು ಅಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಮೂಲಕ ಪಕ್ಷವನ್ನು ಸ್ವಚ್ಛಗೊಳಿಸುವ ಕೆಲಸವಾಗಬೇಕಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಕಲ್ಪದೊಂದಿಗೆ ಇಂದಿಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗಿದ್ದು, ಮೋದಿಯವರ ಕೈ ಬಲಪಡಿಸಲು ನಾವು ನಮ್ಮ ನಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಹೆಚ್ಚಿನ ಬಹುಮತದಲ್ಲಿ ಗೆಲ್ಲಿಸಿಕೊಳ್ಳಲು ಕಂಕಣಬದ್ಧರಾಗಬೇಕು ಎಂದರು.
ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ.ರಾಜೀವ್, ಬೆಂ.ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬ್ಯಾಟರಾಯನಪುರ ಕ್ಷೇತ್ರ ಬಿಜೆಪಿ ಮುಖಂಡ ತಮ್ಮೇಶ್‌ಗೌಡ. ಬ್ಯಾಟರಾಯನಪುರ ನಗರ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾ.ಮಂಡಲ ಅಧ್ಯಕ್ಷ ಆರ್.ಹನುಮಂತಗೌಡ, ಪ್ರಧಾನ ಕಾರ್ಯದರ್ಶಿಗಳಾದ ಬೇಗೂರು ಮಹೇಶ್, ಶ್ರೀಕಂಠಮೂರ್ತಿ, ಯುವ ಮೋರ್ಚಾ ಅಧ್ಯಕ್ಷರಾದ ಲೋಹಿತ್ ಗೌಡ, ತಿಮ್ಮೇಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ಟಿ.ಪಿ.ಪ್ರಕಾಶ್, ಭುಜಂಗಣ್ಣ, ಮುನಿಹನುಮಪ್ಪ, ವಿವಿಧ ವಾರ್ಡ್ ಅಧ್ಯಕ್ಷರಾದ ಕೆ.ಎ.ಅನಿಲ್ ಕುಮಾರ್, ಮಧುಸೂದನ್, ಮಧು, ನಾರಾಯಣ, ಸೋಮಣ್ಣ, ಅಶೋಕ್, ಜಗನ್ನಾಥ್, ಚೇತನ್, ರವಿ, ಎಸ್ಸಿ ಮೋರ್ಚಾ ಅಧ್ಯಕ್ಷ ಸತೀಶ್ ಬಾಬು, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮಂಜುನಾಥ್ ಇದ್ದರು.