ಚುನಾವಣೆ ಬಳಿಕ ರಾಜಕೀಯ ದ್ವೇಷ ಸಲ್ಲ

| Published : Jun 12 2024, 12:30 AM IST

ಸಾರಾಂಶ

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ. ಶ್ರೀನಿವಾಸ್‌ ರನ್ನು ಈ ಕ್ಷೇತ್ರದ ಶಿಕ್ಷಕ ಬಂಧುಗಳು ಜಯಶೀಲರನ್ನಾಗಿ ಮಾಡಿದ್ದು ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಬದ್ಧ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚುನಾವಣೆಯಲ್ಲಿ ಯಾರೇ ಸೋಲಲಿ, ಗೆಲ್ಲಲಿ, ಕಾರ್ಯಕರ್ತರ ಮೇಲೆ ರಾಜಕೀಯ ದ್ವೇಷ ಸಲ್ಲದು. ಚುನಾವಣೆ ನಂತರ ಎಲ್ಲಾ ಕಾರ್ಯಕರ್ತರು ಸಹೋದರರಂತೆ ಒಟ್ಟಿಗೆ ಅಭಿವೃದ್ಧಿ ಕಾರ್ಯಗಳನ್ನು ಗೆದ್ದವರಿಂದ ಮಾಡಿಸಬೇಕು ಎಂದು ಖಾದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ಎನ್. ರಮೇಶ್ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವಣೆಗೆ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ. ಶ್ರೀನಿವಾಸ್‌ ರನ್ನು ಈ ಕ್ಷೇತ್ರದ ಶಿಕ್ಷಕ ಬಂಧುಗಳು ಜಯಶೀಲರನ್ನಾಗಿ ಮಾಡಿದ್ದು ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಬದ್ಧರಾಗಿದ್ದಾರೆಂಬ ವಿಶ್ವಾಸ ನಮಗೆ ಇದೆ ಎಂದರು.

ಪಕ್ಷ ಸಂಘಟಿಸಲು ಯತ್ನ

ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎನ್. ರೆಡ್ಡಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಡಿ.ಟಿ. ಶ್ರೀನಿವಾಸ್ ಅವರಲ್ಲದೆ ಮತ್ತೆ ಕಾಂಗ್ರೆಸ್ ಪಕ್ಷದಿಂದ ನಾಮನಿರ್ದೇಶಕ ಕ್ಷೇತ್ರದಲ್ಲಿ ಸ್ಪರ್ಧಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೂ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಪರವಾಗಿ ನಾನು ತುಂಬಾ ಹೃದಯದ ಅಭಿನಂದನೆಗಳನ್ನು ತಿಳಿಸುತ್ತೇನೆ. ಲೋಕಸಭಾ ಕ್ಷೇತ್ರದ ಚುನಾವಣೆಯ ಸೋಲನ್ನು ಮುಂದಿನ ದಿನಗಳಲ್ಲಿ ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಸಂಘಟಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಕೆ.ಎಂ. ಮುನೇಗೌಡ, ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್, ಡ್ಯಾನ್ಸ್ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ್, ಡಿವಿಆರ್ ರಾಜೇಶ್ ಮತ್ತಿತರರು ಇದ್ದರು.