ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ : ಮಾಜಿ ಸಂಸದ ಡಿ.ಕೆ. ಸುರೇಶ್‌

| Published : Oct 10 2024, 01:06 PM IST

dk suresh

ಸಾರಾಂಶ

ಸಚಿವರಾದ ಡಾ. ಎಚ್‌.ಸಿ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಸಚಿವರಾದ ಡಾ. ಎಚ್‌.ಸಿ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಸ್ಪಷ್ಟಪಡಿಸಿದ್ದಾರೆ. 

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿ, ಸಚಿವರು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದು ಸಾಮಾನ್ಯ ವಿಚಾರ ಎಂದರು. ಮುಡಾ ಪ್ರಕರಣದಿಂದ ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂಬುದು ಸರಿಯಲ್ಲ. ಅತಿಯಾದ ಆತ್ಮವಿಶ್ವಾಸದಿಂದ ಹರ್ಯಾಣದಲ್ಲಿ ನಮಗೆ ಹಿನ್ನಡೆಯಾಗಿದೆಯಷ್ಟೇ. ಹರ್ಯಾಣ ಫಲಿತಾಂಶಕ್ಕೆ ಮುಡಾ ಪ್ರಕರಣವೂ ಕಾರಣ ಎಂದು ಕೆ.ಬಿ. ಕೋಳಿವಾಡ ನೀಡಿರುವ ಹೇಳಿಕೆ ಒಪ್ಪಲಾಗದು ಎಂದರು. ಅದು ಜನರ ತೀರ್ಪು. ಆತ್ಮವಿಶ್ವಾಸದಿಂದಾಗಿ ಈ ಫಲಿತಾಂಶ ಬಂದಿದೆ. ಹೈಕಮಾಂಡ್‌ ಸೋಲಿನ ಬಗ್ಗೆ ಪರಾಮರ್ಶೆ ನಡೆಸುತ್ತಿದೆ. ಹರ್ಯಾಣ, ಜಮ್ಮು-ಕಾಶ್ಮೀರ ಫಲಿತಾಂಶವು ಮುಂಬರುವ ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಆ ರಾಜ್ಯಗಳ ಪರಿಸ್ಥಿತಿಯೇ ಬೇರೆಯಿದೆ ಎಂದರು.

ಮುಡಾ ಪ್ರಕರಣ ಮುಚ್ಚಿ ಹಾಕಲು ಜಾತಿಗಣತಿ ವಿಚಾರ ಮುನ್ನಲೆಗೆ ತಂದಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿ, ಕೆಲಸವಿಲ್ಲದ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುವುದಿಲ್ಲ. ಬೆಳಗ್ಗೆಯೊಂದು, ಸಂಜೆಯೊಂದು ಮಾತನಾಡುತ್ತಾರೆ. ಮಾಧ್ಯಮದವರಿಗೆ ಅವರು ಗಂಭೀರ ವ್ಯಕ್ತಿ ಎಂದೆನಿಸಬಹುದು. ಆದರೆ, ನಮಗಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಬೆನ್ನಿಗಿದ್ದೇವೆ:

ಸಚಿವರಾದ ಡಾ. ಎಚ್‌.ಸಿ.ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಭೇಟಿ ಕುರಿತು ಡಿ.ಕೆ. ಸುರೇಶ್‌ ಪ್ರತಿಕ್ರಿಯಿಸಿ, ಅವರು ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶ ಈಗಾಗಲೇ ನೀಡಿದ್ದೇವೆ. ಅಲ್ಲದೆ, ಸಚಿವರು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದು ಸಾಮಾನ್ಯ ವಿಚಾರ ಎಂದು ಹೇಳಿದರು.