ಮತದಾರರಿಗೆ ಆಮಿಷ ಆರೋಪ: ಸೌಮ್ಯಾ ವಿರುದ್ಧ ಬಿಜೆಪಿ ದೂರು

| Published : Apr 19 2024, 01:34 AM IST / Updated: Apr 19 2024, 04:44 AM IST

Soumya Reddy

ಸಾರಾಂಶ

ಮತದಾರರ ಆಧಾರ್‌ ಕಾರ್ಡ್‌ ಪಡೆದು ಒಂದು ಲಕ್ಷ ರು. ಬಾಂಡ್‌ ನೀಡುವುದಾಗಿ ಆಮಿಷವೊಡ್ಡುತ್ತಿರುವ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೌಮ್ಯಾ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

  ಬೆಂಗಳೂರು :  ಮತದಾರರ ಆಧಾರ್‌ ಕಾರ್ಡ್‌ ಪಡೆದು ಒಂದು ಲಕ್ಷ ರು. ಬಾಂಡ್‌ ನೀಡುವುದಾಗಿ ಆಮಿಷವೊಡ್ಡುತ್ತಿರುವ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೌಮ್ಯಾ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಏಜೆಂಟ್‌ ಆಗಿರುವ ಗಜೇಂದ್ರ ಚುನಾವಣಾ ಆಯೋಗಕ್ಕೆ ಈ ದೂರು ನೀಡಿದ್ದಾರೆ. ‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಮತದಾರರ ಮೇಲೆ ಪ್ರಭಾವ ಬೀರಲು ಅವರ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡು ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು, ಚುನಾವಣೆ ಬಳಿಕ ಒಂದು ಲಕ್ಷ ರು. ಬಾಂಡ್ ನೀಡುವುದಾಗಿ ಆಮಿಷವೊಡ್ಡುತ್ತಿದ್ದಾರೆ’ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್‌ನ ಮಂಜುನಾಥ ರೆಡ್ಡಿ ಮತ್ತು ಇತರರು ಏ.4ರಂದು ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಸೂಚನೆ ಮೇರೆಗೆ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಮುಗಿದ ಬಳಿಕ ಒಂದು ಲಕ್ಷ ರು. ಬಾಂಡ್‌ ಗ್ಯಾರಂಟಿ ಕಾರ್ಡ್ ನೀಡುವುದಾಗಿ ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ, ಏಜೆಂಟರು ಮತ್ತು ಸಹಚರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.