ಸಾರಾಂಶ
ಪಿಟಿಐ ನವದೆಹಲಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ‘ಪ್ರೋತ್ಸಾಹದಾಯಕ’ ವಾತಾವರಣವನ್ನು ಸೃಷ್ಟಿಸಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
ಶನಿವಾರ ಬಿಜೆಪಿ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಯನ್ನು ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸಭೆಯ ಆವರಣದಲ್ಲಿಯೇ ಕೂಗಿದ್ದಾರೆ ಎಂದು ವಿಧಿವಿಜ್ಞಾನ ವಿಶ್ಲೇಷಣೆ ಹೇಳಿದೆ.
ಇದಾದ ನಂತರ ಬೆಂಗಳೂರಿನಲ್ಲಿ ನಡೆದ ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ. ಎರಡು ಘಟನೆಗಳಿಗೆ ಸಂಬಂಧವಿದೆಯೇ ಎಂಬ ತನಿಖೆಯಾಗಬೇಕು’ ಎಂದರು.ಪಾಕ್ ಜಿಂದಾಬಾದ್ ಘೋಷಣೆ ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಮೊದಲು ಹುಯಿಲೆಬ್ಬಿಸಲಾಯಿತು.
ಈಗ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಾಪಾರದ ಪೈಪೋಟಿಗೆ ಸಂಬಂಧಿಸಿದಂತೆ ಸ್ಫೋಟ ನಡೆದಿರಬಹುದು ಎಂದು ಘಟನೆಯ ತೀವ್ರತೆ ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ.
ಘಟನೆಯನ್ನು ರತ್ನಗಂಬಳಿಯ ಕೆಳಗೆ ತಳ್ಳಲು ಪೊಲೀಸರ ಮೇಲೆ ಒತ್ತಡ ಹೇರುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ಮತ್ತು ತುಷ್ಟೀಕರಣ ರಾಜಕಾರಣ ಜೋರಾಗಿ ಆರಂಭವಾಗಿದೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೆಲವರು ಕಾನೂನಿಗಿಂತ ಮೇಲು ಎಂದು ಭಾವಿಸುತ್ತಾರೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಗಳು ಮತ್ತು ಇತರ ಅಪರಾಧಗಳಲ್ಲಿ ತೊಡಗಿರುವವರಿಗೆ ಉತ್ತೇಜನ ನೀಡುವ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ವಕ್ತಾರ ಪ್ರತ್ಯೂಷ್ ಕಾಂತ್ ಮಾತನಾಡಿ, ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಪರವಾಗಿ ಟೀಕೆಗಳನ್ನು ಮಾಡಿದ ಇತಿಹಾಸವನ್ನು ಹೊಂದಿದೆ ಮತ್ತು ಬಿಕೆ ಹರಿಪ್ರಸಾದ್ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಪಾಕ್‌ನೊಂದಿಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದ್ದರು ಎಂದು ಉಲ್ಲೇಖಿಸಿದರು.