ಮೇಕೆದಾಟು ಡ್ಯಾಂಗೆ ಅನುಮತಿ ನೀಡಿ, ನೀರಿನ ಸಮಸ್ಯೆ ಬಗೆಹರಿಸ್ತೀವಿ: ಸಿಎಂ

| Published : Apr 22 2024, 02:00 AM IST / Updated: Apr 22 2024, 04:45 AM IST

ಮೇಕೆದಾಟು ಡ್ಯಾಂಗೆ ಅನುಮತಿ ನೀಡಿ, ನೀರಿನ ಸಮಸ್ಯೆ ಬಗೆಹರಿಸ್ತೀವಿ: ಸಿಎಂ
Share this Article
  • FB
  • TW
  • Linkdin
  • Email

ಸಾರಾಂಶ

‘ಟೆಕ್‌ ಸಿಟಿಯನ್ನು ಟ್ಯಾಂಕರ್‌ ಸಿಟಿ ಮಾಡಿದ್ದು ಕಾಂಗ್ರೆಸ್‌’ ಎಂಬ ಪ್ರಧಾನಿ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇಂದ್ರ  ಮೇಕೆದಾಟು ಯೋಜನೆಗೆ ಅನುಮತಿ ನೀಡಲಿ, ಆಗ ನಾಳೆಯೇ ಕಾಮಗಾರಿ ಶುರು ಮಾಡಿ ನೀರಿನ ಸಮಸ್ಯೆಗೆ ತಿಲಾಂಜಲಿ ಹಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

 ಬಂಗಾರಪೇಟೆ‘ :  ಟೆಕ್‌ ಸಿಟಿಯನ್ನು ಟ್ಯಾಂಕರ್‌ ಸಿಟಿ ಮಾಡಿದ್ದು ಕಾಂಗ್ರೆಸ್‌’ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಲಿ, ಆಗ ನಾಳೆಯೇ ಕಾಮಗಾರಿ ಶುರು ಮಾಡಿ ಬೆಂಗಳೂರಿನಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ತಿಲಾಂಜಲಿ ಹಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬಂಗಾರಪೇಟೆಯಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಭಾನುವಾರ ಬೃಹತ್ ರೋಡ್ ಶೋ ನಡೆಸಿದ ಅವರು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಶನಿವಾರ ಮಾಡಿದ ‘ಟ್ಯಾಂಕರ್‌ ಸಿಟಿ’ ಟೀಕೆಗೆ ಸಂಬಂಧಿಸಿ ಭಾಷಣದಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೆ. ಅದರ ಪರಿಹಾರಕ್ಕಾಗಿ ನಾವು ನಾಳೆಯೇ ಮೇಕೆದಾಟು ಕಾಮಗಾರಿ ಆರಂಭಿಸಲು ಸಿದ್ಧ. ಆದರೆ ಅವರು ಅನುಮತಿ ಕೊಡುತ್ತಾರೆಯೇ ಎಂದು ಕೇಂದ್ರ ಸರ್ಕಾರದ ಕಾಲೆಳೆದರು.

ನರೇಂದ್ರ ಮೋದಿ ಅವರು ಉಚಿತ ಅಕ್ಕಿ ಕೊಟ್ಟಿಲ್ಲ. ರಾಜ್ಯದಲ್ಲಿ ಉಚಿತ ಅಕ್ಕಿ ಕೊಟ್ಟಿದ್ದು ನಾನು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇನ್ನೂ ಐದು ಕೆ.ಜಿ.ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು. ಅದರಂತೆ ನಾವು ದುಡ್ಡು ಕೊಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಅವರು ಅಕ್ಕಿ ಪೂರೈಸುತ್ತಿಲ್ಲ. ಹತ್ತು ಕೆ.ಜಿ. ಉಚಿತ ಅಕ್ಕಿ ಕೊಟ್ಟರೆ ಬಡವರು ಸಿದ್ದರಾಮಯ್ಯ ಪರ ಆಗುತ್ತಾರೆ ಎಂದು ಅವರು ಕೊಡಲಿಲ್ಲ. ಹೀಗಾಗಿ ನಾವು ಅಕ್ಕಿ ಬದಲು ನಾವು 170 ರುಪಾಯಿ ಕೊಡುತ್ತಿದ್ದೇವೆ ಎಂದರು.