ವಿಧಾನಸೌಧ : ಬಾಬು ಜಗ ಜೀವನ್ ರಾಮ್ ಅಪ್ರತಿಮ ನಾಯಕ - ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

| N/A | Published : Apr 06 2025, 01:46 AM IST / Updated: Apr 06 2025, 07:36 AM IST

ಸಾರಾಂಶ

ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು : ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು, ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ದಕ್ಷತೆಯಿಂದ ಕಾರ್ಯ ನಿರ್ವಹಿಸಿದರು. ಅವರು ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ ಎಂದರು.

ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ದೇಶದ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ ಎಂದು ಹೇಳಿದ್ದ ಜಗಜೀವನ್ ರಾಮ್ ಅವರು ಅಪ್ರತಿಮ ದೇಶಭಕ್ತ ಆಗಿದ್ದರು. ದೇಶದ ಮಾದರಿ ನಾಯಕನ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.