ಸಾರಾಂಶ
ಬಿಬಿಎಂಪಿಯ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.
ಬೆಂಗಳೂರುಬಿಬಿಎಂಪಿಯ ಮುಖ್ಯ ಆಯುಕ್ತರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.
ಇನ್ನು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ್ ರಾವ್ ಅವರಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎರಡು ತಿಂಗಳು ಬಿಬಿಎಂಪಿಯ ಆಯುಕ್ತರಾಗಿ ಎಂ.ಮಹೇಶ್ವರ್ ರಾವ್ ಕಾರ್ಯನಿರ್ವಹಿಸಿದ್ದರು. ಇದೀಗ ಪಾಲಿಕೆ ಮುಖ್ಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಇನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಎಸ್.ಆರ್.ಉಮಾಶಂಕರ್ ಏ.30ಕ್ಕೆ ನಿವೃತ್ತಿಯಾಗುತ್ತಿದ್ದು, ಆ ಹುದ್ದೆಗೆ ತುಷಾರ್ ಗಿರಿನಾಥ್ ನೇಮಕ ಮಾಡಲಾಗಿದೆ. ಜತೆಗೆ ಬಿಬಿಎಂಪಿಯ ಆಡಳಿತಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ತುಷಾರ್ ಗಿರಿನಾಥ್ ಅವರಿಗೆ ವಹಿಸಲಾಗಿದೆ.