ಸಾರಾಂಶ
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.
ಜೈಲಿನಲ್ಲಿರುವ ಮಾಜಿ ಸಚಿವರ ಭೇಟಿಗೆ 20ಕ್ಕೂ ಹೆಚ್ಚಿನ ಕಾರುಗಳಲ್ಲಿ ಅವರ ಸ್ವಕ್ಷೇತ್ರ ಬಳ್ಳಾರಿ ಗ್ರಾಮಾಂತರದಿಂದ ಕಾಂಗ್ರೆಸ್ ಮುಖಂಡರು ಆಗಮಿಸಿದ್ದರು. ಆದರೆ, ಒಂದೇ ಬಾರಿಗೆ ಅಷ್ಟು ಕಾರ್ಯಕರ್ತರ ಭೇಟಿಗೆ ನಿಯಮಾನುಸಾರ ಅವಕಾಶ ಇಲ್ಲದ ಕಾರಣ, ಕಾರಾಗೃಹದ ಅಧಿಕಾರಿಗಳು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಮಾತ್ರ ನಾಗೇಂದ್ರ ಅವರ ಭೇಟಿಗೆ ಅವಕಾಶ ನೀಡಿದರು.
ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ದಿನಗಳ ಕಾಲ ಇ.ಡಿ. ವಶದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರನ್ನು ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.