ಬಿಜೆಪಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ ಆರೋಪ

| Published : Mar 30 2024, 12:51 AM IST / Updated: Mar 30 2024, 12:57 PM IST

ಬಿಜೆಪಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಪ್ರತಿಪಕ್ಷಗಳಿಗೆ ಕಿರುಕುಳ ನೀಡಲು ಐಟಿ ಇಲಾಖೆಯನ್ನು ಏಕೆ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಇಂತಹ ಕ್ರಮಗಳಿಂದ ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷ ದುರುಪಯೋಗ ಪಡಿಸಿಕೊಂಡ ಸಂಸ್ಥೆಗಳನ್ನು ಬಿಜೆಪಿಯ ಸರ್ವಾಧಿಕಾರತ್ವದಿಂದ ಮುಕ್ತಿಗೊಳಿಸುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಈ ಬಗ್ಗೆ ತಮ್ಮ ಟ್ವೀಟರ್‌ ಖಾತೆಯಲ್ಲಿ ‘ಪ್ರತಿಪಕ್ಷಗಳ ಮೇಲೆ ಐಟಿ ದಾಳಿ ಮಾಡುವಂತೆ ಒತ್ತಡ ಹೇರುತ್ತಿರುವರು ಯಾರು?, ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರೋಧ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಕಿರುಕುಳ ನೀಡಲು ಐಟಿ ಇಲಾಖೆಯನ್ನು ಏಕೆ ಬಳಸುಕೊಳ್ಳುತ್ತಿದ್ದಾರೆ. 

ಮೋದಿ ಪ್ರಜಾಪ್ರಭುತ್ವಕ್ಕೆ ದಕ್ಕೆಯುಂಟು ಮಾಡಿ, ಸಂವಿಧಾನವನ್ನು ಅಗೌರವ ತೋರಿಸುತ್ತಿದ್ದಾರೆ’ ಎಂದು ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ ಎಂದಿಗೂ ಹೆದರುವುದಿಲ್ಲ! ನಾವು ನಮ್ಮ ಸಂಪೂರ್ಣ ಶಕ್ತಿಯಿಂದ ಚುನಾವಣೆಯನ್ನು ಎದುರಿಸುತ್ತೇವೆ ಎಂದ ಅವರು, ‘ಲೋಕಸಭೆ ಚುನಾವಣೆಗೆ ಮುನ್ನವೇ ಜಾರಿಯಾಗಿರುವುದು ಹಲವು ವರ್ಷಗಳ ಹಿಂದಿನ ಈ ಐಟಿ ನೋಟೀಸ್‌ಗಳು, ಬಿಜೆಪಿಯ ಷಡ್ಯಂತ್ರವನ್ನು ಸಾಬೀತುಪಡಿಸುತ್ತದೆಯೇ’ ಎಂದೂ ಪ್ರಶ್ನಿಸಿದರು.