2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಅವರು, ನನಗೂ ಚದುರಂಗದ ಆಟ ಬರುತ್ತದೆ.

ಹಾಸನ : 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನನಗೂ ಚದುರಂಗದ ಆಟ ಬರುತ್ತದೆ

ಈ ಕುರಿತು ಮಾತನಾಡಿದ ಅವರು, ನನಗೂ ಚದುರಂಗದ ಆಟ ಬರುತ್ತದೆ. ಸಮಯ ಬಂದಾಗ ಪಾನ್‌ ಮುಂದೆ ಇಡುತ್ತೇನೆ. ಈ ಬಾರಿ ಕುಮಾರಸ್ವಾಮಿಯ ಇನ್ನೊಂದು ಮುಖವನ್ನು ತೋರಿಸುತ್ತೇನೆ ಎಂಬ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆಯುವಂತಿತ್ತು. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಸರ್ಕಾರದ ಕಾರ್ಯವೈಖರಿ ಕುರಿತು ಮುಕ್ತ ಚರ್ಚೆ ನಡೆಯಬೇಕು ಎಂದರು.

ಬಹಿರಂಗವಾಗಿ ಒಪ್ಪಿಕೊಂಡು ಸರಿಪಡಿಸಿಕೊಳ್ಳುವುದಾಗಿ ಹೇಳಿದ್ದೇನೆ

ಹಿಂದೆ ತಮ್ಮಿಂದ ತಪ್ಪುಗಳಾಗಿದ್ದರೆ ಅವುಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ಸರಿಪಡಿಸಿಕೊಳ್ಳುವುದಾಗಿ ಹೇಳಿದ್ದೇನೆ. ತಪ್ಪುಗಳನ್ನು ಒಪ್ಪಿಕೊಳ್ಳುವುದು ದೌರ್ಬಲ್ಯವಲ್ಲ. ಜನರು ನೀಡಿರುವ ಶಕ್ತಿಯನ್ನು ಬಳಸಿಕೊಂಡು ಜನಪರ ವಿಚಾರಗಳಿಗಾಗಿ ಹೋರಾಟ ನಡೆಸುವುದು ತಮ್ಮ ಉದ್ದೇಶ ಎಂದು ಹೇಳಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ಮೂಲಕ ಸರ್ಕಾರದ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿರುವ ಕುಮಾರಸ್ವಾಮಿ, ತಮ್ಮ ರಾಜಕೀಯ ಹೋರಾಟ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂಬ ಸಂದೇಶ ನೀಡಿದ್ದಾರೆ.