ಸಾರಾಂಶ
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಕೇಸ್ ಕುರಿತ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಸೋಮವಾರ ‘ಧರ್ಮಸ್ಥಳ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಆಗಮಿಸಲಿರುವ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಂಗವಾಗಿ ಮಧ್ಯಾಹ್ನ 2 ಗಂಟೆಗೆ ವಿಜಯೇಂದ್ರ ನೇತೃತ್ವದಲ್ಲಿ ‘ಧರ್ಮಸ್ಥಳ ಚಲೋ, ಧರ್ಮದೆಡೆಗೆ ನಮ್ಮ ನಡಿಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ಸಮಾವೇಶದ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರ, ಎಲ್ಲ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳಕ್ಕೆ ಹೊರಡುವುದಕ್ಕೂ ಮೊದಲು ಕಾರ್ಯಕರ್ತರು, ತಮ್ಮ ನಗರ, ಗ್ರಾಮಗಳಲ್ಲಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ, ಸ್ಥಳೀಯವಾಗಿ ಮೆರವಣಿಗೆ ನಡೆಸಲಿದ್ದಾರೆ. ಬಳಿಕ, ಮಧ್ಯಾಹ್ನ 1 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದ್ದು, ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ, ಪ್ರಸಾದ ಸ್ವೀಕರಿಸಿ, ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಯಿಂದ ‘ಧರ್ಮಸ್ಥಳ ಚಲೋ, ಧರ್ಮದೆಡೆಗೆ ನಮ್ಮ ನಡಿಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಕರ್ನಾಟಕದ ಉಸ್ತುವಾರಿ ಸುಧಾಕರ್ ರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವು ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
- ಬುರುಡೆ ಕೇಸ್‌ನ ಎನ್‌ಐಎ ತನಿಖೆ ಪಟ್ಟು
- ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ
- 1 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ
- ವಿಜಯೇಂದ್ರ, ಜೋಶಿ, ಶೋಭಾ, ಚೌಟ ಭಾಗಿ
--ಧರ್ಮಸ್ಥಳ ಕೇಸಿನ ಎನ್‌ಐಎ ತನಿಖೆ ಅಗತ್ಯವಿಲ್ಲ: ಸಿಎಂ