ಬಿಜೆಪಿಯಿಂದ ರಘುಪತಿ ಭಟ್‌ ಉಚ್ಚಾಟನೆ

| Published : May 26 2024, 01:39 AM IST / Updated: May 26 2024, 04:15 AM IST

Raghupathi Bhat

ಸಾರಾಂಶ

ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ನೈಋತ್ಯ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

  ಬೆಂಗಳೂರು :  ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ನೈಋತ್ಯ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್‌ ಡಾ.ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸಿದೆ. ಆದರೂ ರಘುಪತಿ ಭಟ್‌ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಪಕ್ಷಕ್ಕೆ ಮುಜುಗರ ತಂದಿದೆ. ಅಲ್ಲದೇ, ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ರಘುಪತಿ ಭಟ್‌ಗೆ ನೀಡಿರುವ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಕ್ಷವು ಇತ್ತೀಚೆಗೆ ರಘುಪತಿ ಭಟ್​​ಗೆ ನೋಟಿಸ್ ನೀಡಿದ್ದು, ಶಿಸ್ತು ಸಮಿತಿ ಮುಂದೆ ಬಂಡಾಯ ಸ್ಪರ್ಧೆಗೆ ಸಂಬಂಧಿಸಿದಂತೆ 2 ದಿನದೊಳಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿತ್ತು. ಆದರೂ ಸಮರ್ಪಕವಾದ ಉತ್ತರ ನೀಡದ ಕಾರಣಕ್ಕಾಗಿ ಉಚ್ಚಾಟನೆ ಮಾಡಲಾಗಿದೆ.