ಬಿಜೆಪಿ ಮಾತು ಆರೋಗ್ಯಕರ ಸಮಾಜಕ್ಕೆ ಮಾರಕ : ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್‌

| N/A | Published : Mar 28 2025, 01:18 AM IST / Updated: Mar 28 2025, 02:56 AM IST

ಸಾರಾಂಶ

ಜಾತಿ, ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತಿರುವ ಬಿಜೆಪಿಗರ ಮಾತುಗಳನ್ನು ಯಾರು ನಂಬಬಾರದು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್‌ ಹೇಳಿದರು.

  ಬೆಂಗಳೂರು : ಜಾತಿ, ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತಿರುವ ಬಿಜೆಪಿಗರ ಮಾತುಗಳನ್ನು ಯಾರು ನಂಬಬಾರದು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್‌ ಹೇಳಿದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಮತ್ತು ಬೆಂಗಳೂರು ಪಶ್ಚಿಮ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳಾಗಿ ಆಯ್ಕೆಯಾದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಬಿಜೆಪಿ ಉದ್ಯಮಿಗಳಿಂದ ಸಾವಿರಾರು ಕೋಟಿ ದೇಣಿಗೆ ಪಡೆದು ಚುನಾವಣೆಯಲ್ಲಿ ಗೋಲ್‌ಮಾಲ್‌ ನಡೆಸುತ್ತಿದ್ದರೂ ಪ್ರಜ್ಞಾವಂತರು ಮೌನವಹಿಸಿದ್ದಾರೆ. ಇದನ್ನೇ ವರದಾನವಾಗಿ ಮಾಡಿಕೊಂಡಿರುವ ಬಿಜೆಪಿ ಮನಸೋಇಚ್ಛೆ ವರ್ತಿಸುತ್ತಿರುವುದು ಖಂಡನೀಯ ಎಂದರು.

ಕೆಪಿಸಿಸಿ ವಕ್ತಾರೆ ಎಚ್‌.ಕುಸುಮಾ ಮಾತನಾಡಿ, ಓರ್ವ ಸ್ತ್ರೀ ಪೀಡಕ, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟ ನಡೆಸಲು ದೃಢ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿ ಸದಸ್ಯ ಬೆಟ್ಟಸ್ವಾಮಿ ಗೌಡ, ಹಿಂದುಳಿದ ವಿಭಾಗದ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್ ಉಪಸ್ಥಿತರಿದ್ದರು. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಫೋಟೋ

ರಾಜರಾಜೇಶ್ವರಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ವಿವಿಧ ಬ್ಲಾಕ್‌ ಯುವ ಕಾಂಗ್ರೆಸ್‌ಗೆ ಆಯ್ಕೆ ಆದವರನ್ನು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹನುಮಂತರಾಯಪ್ಪ, ಕೆಪಿಸಿಸಿ ವಕ್ತಾರೆ ಎಚ್‌.ಕುಸುಮಾ ಅಭಿನಂದಿಸಿದರು.