ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ ಇಂದಿನಿಂದ ಜನಾಕ್ರೋಶ ಯಾತ್ರೆ

| N/A | Published : Apr 07 2025, 12:31 AM IST / Updated: Apr 07 2025, 05:00 AM IST

ಸಾರಾಂಶ

ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರಮುಖ ಪ್ರತಿಪಕ್ಷ ಬಿಜೆಪಿ ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

 ಬೆಂಗಳೂರು : ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರಮುಖ ಪ್ರತಿಪಕ್ಷ ಬಿಜೆಪಿ ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಈ ಯಾತ್ರೆ ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ಮೇ 3ಕ್ಕೆ ಅಂತ್ಯಗೊಳ್ಳಲಿದೆ.

ಸೋಮವಾರ ಮೈಸೂರಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಸೇರಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸಂಜೆ 4ಗಂಟೆಗೆ ಕೇಂದ್ರ ಅಂಚೆ ಕಚೇರಿ ವೃತ್ತದಿಂದ ಗಾಂಧಿ ಚೌಕ್‌ವರೆಗೆ ಪಾದಯಾತ್ರೆ ಮೂಲಕ ಜನಾಕ್ರೋಶ ಯಾತ್ರೆ ನಡೆಯಲಿದೆ.

ಕಳೆದ ಬುಧವಾರ ಬಿಜೆಪಿ ಇದೇ ವಿಷಯಗಳನ್ನು ಮುಂದಿಟ್ಟುಕೊಂಡು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು. ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟಕ್ಕೆ ಚಾಲನೆ ನೀಡಿತ್ತು. ಬಳಿಕ ಶನಿವಾರ ರಾಜ್ಯಾದ್ಯಂತ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ಜನಾಕ್ರೋಶ ಯಾತ್ರೆ ಆರಂಭವಾಗುತ್ತಿದೆ.

ಜನಾಕ್ರೋಶ ಯಾತ್ರೆಯ ವಿವರ:

ಮೊದಲ ಹಂತ:

ಸೋಮವಾರ ಮೈಸೂರಿನಲ್ಲಿ ಚಾಲನೆ. ಮಂಗಳವಾರ (ಏ.8) ಮಂಡ್ಯ ಮತ್ತು ಹಾಸನ, ಬುಧವಾರ (ಏ.9) ಕೊಡಗು ಹಾಗೂ ಮಂಗಳೂರು, ಗುರುವಾರ (ಏ.10) ಉಡುಪಿ ಮತ್ತು ಚಿಕ್ಕಮಗಳೂರು, ಶುಕ್ರವಾರ (ಏ.11) ಉತ್ತರ ಕನ್ನಡ ಹಾಗೂ ಶಿವಮೊಗ್ಗ.

ಎರಡನೇ ಹಂತ:

ಏ.15ರಂದು ನಿಪ್ಪಾಣಿ, 16ರಂದು ಬೆಳಗಾವಿ ಮತ್ತು ಹುಬ್ಬಳ್ಳಿ, 17ರಂದು ಬಾಗಲಕೋಟೆ ಹಾಗೂ ವಿಜಯಪುರ, 18ರಂದು ಕಲಬುರಗಿ ಮತ್ತು ಬೀದರ್‌.

ಮೂರನೇ ಹಂತ:

ಏ.21ರಂದು ದಾವಣಗೆರೆ ಹಾಗೂ ಹಾವೇರಿ, 22ರಂದು ಗದಗ ಮತ್ತು ಕೊಪ್ಪಳ, 23ರಂದು ಯಾದಗಿರಿ ಹಾಗೂ ರಾಯಚೂರು, 24ರಂದು ಬಳ್ಳಾರಿ ಮತ್ತು ವಿಜಯನಗರ, 25ರಂದು ಚಿತ್ರದುರ್ಗ ಹಾಗೂ ತುಮಕೂರು.

ನಾಲ್ಕನೇ ಹಂತ:

ಏ.27ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ, ಮೇ 3ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ.

ರಾಜ್ಯವ್ಯಾಪಿ ಹೋರಾಟ

ಅಗತ್ಯವಸ್ತು ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಎಸ್ಸು ಅನುದಾಣ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಳಿಕ ಬಿಜೆಪಿ ನಾಯಕರಿಂದ ರಾಜ್ಯವ್ಯಾಪಿ ಹೋರಾಟ, ಸರ್ಕಾರಕ್ಕೆ ಬಿಸಿಮುಟ್ಟಿಸಲು ಯತ್ನ

ಮೈಸೂರಲ್ಲಿ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಚಾಲನೆ. ಒಟ್ಟು 4 ಹಂತದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಬಿಜೆಪಿ ನಿರ್ಧಾರ

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಡಿವಿ ಸೇರಿ ಗಣ್ಯರು ಭಾಗಿ

ಎಂದು? ಎಲ್ಲಿ ಯಾತ್ರೆ?  ಮೊದಲ ಹಂತಸೋಮವಾರ ಮೈಸೂರಿನಲ್ಲಿ ಚಾಲನೆ. ಏ.8ಕ್ಕೆ ಮಂಡ್ಯ, ಹಾಸನ. ಏ.9ಕ್ಕೆ ಕೊಡಗು, ಮಂಗಳೂರು. ಏ.10ಕ್ಕೆ ಉಡುಪಿ, ಚಿಕ್ಕಮಗಳೂರು. ಏ.11ಕ್ಕೆ ಉತ್ತರ ಕನ್ನಡ, ಶಿವಮೊಗ್ಗ.

ಎರಡನೇ ಹಂತಏ.15ಕ್ಕೆ ನಿಪ್ಪಾಣಿ, ಏ16ಕ್ಕೆ ಬೆಳಗಾವಿ, ಹುಬ್ಬಳ್ಳಿ, ಏ.17ಕ್ಕೆ ಬಾಗಲಕೋಟೆ, ವಿಜಯಪುರ, ಏ.18ರಂದು ಕಲಬುರಗಿ ಮತ್ತು ಬೀದರ್‌.ಮೂರನೇ ಹಂತಏ.21ರಂದು ದಾವಣಗೆರೆ, ಹಾವೇರಿ. ಏ22ಕ್ಕೆ ಗದಗ, ಕೊಪ್ಪಳ. ಏ.23ಕ್ಕೆ ಯಾದಗಿರಿ, ರಾಯಚೂರು. ಏ 24ಕ್ಕೆ ಬಳ್ಳಾರಿ, ವಿಜಯನಗರ. ಏ 25ಕ್ಕೆ ಚಿತ್ರದುರ್ಗ, ತುಮಕೂರು.ನಾಲ್ಕನೇ ಹಂತ:ಏ.27ರಂದು ಕೋಲಾರ, ಚಿಕ್ಕಬಳ್ಳಾಪುರ. ಮೇ 3ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ.