ಹಿರಿಯೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನನಗೆ ಪ್ರತಿಷ್ಠೆಯ ವಿಷಯವಲ್ಲ. ಬದಲಾಗಿ, ಕ್ಷೇತ್ರದ ಜನರ ಅಭಿಪ್ರಾಯವನ್ನು ಗೌರವಿಸಬೇಕಿದೆ. ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಬೇಕು ಎಂಬುದು ಸ್ಥಳೀಯ ನಾಯಕರ, ಜನರ ಅಭಿಪ್ರಾಯ

ರಾಮನಗರ : ಹಿರಿಯೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ನನಗೆ ಪ್ರತಿಷ್ಠೆಯ ವಿಷಯವಲ್ಲ. ಬದಲಾಗಿ, ಕ್ಷೇತ್ರದ ಜನರ ಅಭಿಪ್ರಾಯವನ್ನು ಗೌರವಿಸಬೇಕಿದೆ. ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಬೇಕು ಎಂಬುದು ಸ್ಥಳೀಯ ನಾಯಕರ, ಜನರ ಅಭಿಪ್ರಾಯ. ಇದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಮನವೊಲಿಸುತ್ತೇವೆ ಎಂಬ ಹೇಳಿಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಕುರಿತು ಜೆಡಿಎಸ್ ಮನವೊಲಿಸುತ್ತೇವೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅಲ್ಲಿ ಜೆಡಿಎಸ್ ಸ್ಪರ್ಧಿಸಬೇಕೋ ಅಥವಾ ಬಿಜೆಪಿ ಸ್ಪರ್ಧಿಸಬೇಕೋ ಎಂಬುದಕ್ಕಿಂತ ಜನರ ಅಭಿಪ್ರಾಯ ಮುಖ್ಯ. ರಾಜ್ಯದಲ್ಲಿ ಮೈತ್ರಿಯ ರಾಜಕೀಯ ಭವಿಷ್ಯಕ್ಕಾಗಿ ಈ ಚುನಾವಣೆ ಗೆಲ್ಲುವುದು ಮುಖ್ಯ. ಈ ವಿಚಾರದಲ್ಲಿ ಎರಡೂ ಪಕ್ಷಗಳಿಗೂ ಜವಾಬ್ದಾರಿ ಇದೆ ಎಂದರು.

ವಾಸ್ತವಿಕ ಪರಿಸ್ಥಿತಿ ಏನಿದೆ

ಅಲ್ಲಿನ ವಾಸ್ತವಿಕ ಪರಿಸ್ಥಿತಿ ಏನಿದೆ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ಹಿರಿಯೂರಿನಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧಿಸಬೇಕು ಎಂಬುದು ಸ್ಥಳೀಯ ನಾಯಕರ, ಜನರ ಅಭಿಪ್ರಾಯ. ನನಗೆ ಇಲ್ಲಿ ಯಾವುದೇ ಪ್ರತಿಷ್ಠೆಯಿಲ್ಲ. ಹಿರಿಯೂರು ಕ್ಷೇತ್ರದ ಜನರ ಅಭಿಪ್ರಾಯವನ್ನು ಗೌರವಿಸಬೇಕು. ಕ್ಷೇತ್ರದ ಜನರ ಅಭಿಪ್ರಾಯಕ್ಕೆ ಮೊದಲ ಆದ್ಯತೆ ನೀಡಬೇಕು. ಇದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.