ಇಂದು ಬೆಲೆ ಏರಿಕೆ ವಿರಿದ್ಧ ಬಿಜೆಪಿ ಪ್ರತಿಭಟನೆ

| Published : Jun 19 2024, 01:08 AM IST

ಸಾರಾಂಶ

ಅಭಿವೃದ್ಧಿ ಮಾಡೋಕೆ ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಅಂತಾ ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರದ ಆದಾಯವನ್ನ ಏನ್ ಮಾಡುತ್ತಿದ್ದೀರೆ. ಬಿಜೆಪಿ ಸರ್ಕಾರದಿಂದ ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಾಜ್ಯದ ಆದಾಯ ಅಧಿಕವಿತ್ತು. ಅದು ಏನಾಯ್ತು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಬೆಲೆ ಏರಿಕೆ, ಭ್ರಷ್ಟಾಚಾರ, ಹದಗೆಟ್ಟ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ 19 ಬುಧವಾರದಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ.ವಿ.ರಾಮಲಿಂಗಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರವನ್ನ ದೂರುವ ಕೆಲಸ ಮಾಡ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಒಂದು ವರ್ಷದಲ್ಲಿ ಹಾಲಿನ ದರ, ವಿದ್ಯುತ್ ದರ, ಅಬಕಾರಿ ಸೇರಿದಂತೆ ಎಲ್ಲಾ ದರ ಹೆಚ್ಚು ಮಾಡಿದ್ದಾರೆ. ಹಾಗಾದರೆ ಆದಾಯ ಎಲ್ಲಿ ಹೋಗ್ತಿದೆ ಎಂದು ಪ್ರಶ್ನಿಸಿದರು.

ಸಿಎಂಗೆ ನೈತಿಕತೆ ಇಲ್ಲ

ಈಗ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡ್ತಿದ್ದಾರೆ.ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ಹಣ ಆಂಧ್ರಪ್ರದೇಶದ ಚುನಾವಣೆಗೆ ಹೋಗಿದೆ. ಅದೂ ಸಹ ಬೇನಾಮಿ ಖಾತೆ ಮುಖಾಂತರ ಹೋಗಿದೆ. ಮುಖ್ಯಮಂತ್ರಿಗಳೇ ತಾವೇ ರಾಜ್ಯದ ಹಣಕಾಸು ಮಂತ್ರಿಯಾಗಿದ್ದೀರಿ, ಭ್ರಷ್ಟಾಚಾರದಬಗ್ಗೆ ಮಾತನಾಡೋಕೆ ನಿಮಗೆ ನೈತಿಕತೆ ಇದೆಯಾ ಎಂದು ಪ್ರಸ್ನಿಸಿದರು.

ಅಭಿವೃದ್ಧಿ ಮಾಡೋಕೆ ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಅಂತಾ ಹೇಳುತ್ತಾರೆ. ಹಾಗಾದರೆ ರಾಜ್ಯ ಸರ್ಕಾರದ ಆದಾಯವನ್ನ ಏನ್ ಮಾಡುತ್ತಿದ್ದೀರೆ. ಬಿಜೆಪಿ ಸರ್ಕಾರದಿಂದ ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ರಾಜ್ಯದ ಆದಾಯ ಅಧಿಕವಿತ್ತು ಆ ಹಣವನ್ನು ಏನು ಮಾಡಿದಿರಿ, ಆದಾಯ ಹೆಚ್ಚಳವಿದ್ದ ಕರ್ನಾಟಕದಲ್ಲಿ ಕಳೆದ ಒಂದು ವರ್ಷದಲ್ಲಿ ಯಾವ ರೀತಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದರು.

ಪ್ರತಿಭಟನೆಯಲ್ಲಿ ಸಂಸದ ಡಾ.ಕೆ.ಸುಧಾಕರ್, ರಾಜ್ಯ ಮಟ್ಟದ ನಾಯಕರು, ರಾಜ್ಯ, ಜಿಲ್ಲಾ, ಮಂಡಲ ಸ್ಥರದ ಎಲ್ಲಾ ಪದಾಧಿಕಾರಿಗಳು, ಮುಖಂಡರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.