ಸಾರಾಂಶ
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಬೆಂಗಳೂರು : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಎಲ್ಲ ಹಂತದ ಮುಖಂಡರು ಹಾಗೂ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.