''ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯ : ಸಿಎಂ ಆಗುವ ಅವಕಾಶವಿದೆ''

| N/A | Published : Apr 08 2025, 10:42 AM IST

BY Vijayendra

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.

 ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ. 

ಇಂದು ಮೂರೂ ಪಕ್ಷಗಳ ರಾಜಕಾರಣ ಛಿದ್ರವಾಗಿದೆ. ರಾಜಕಾರಣದಲ್ಲಿ ನನಗೆ ಅನ್ಯಾಯವಾಗಿದೆ. ಈ ಹಿಂದೆ ಯಡಿಯೂರಪ್ಪನವರು ರಾಜ್ಯದ ಸಿಎಂ ಆಗಿ ಉತ್ತಮ ಆಡಳಿತ ನೀಡಿದ್ದಾರೆ. ಅವರಂತೆ ಅವರ ಮಗ ವಿಜಯೇಂದ್ರ ಕೂಡ ಈಗ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಸಿಎಂ ಆಗುವ ಅವಕಾಶವಿದೆ ಎಂದಿದ್ದಾರೆ.