ಮೋದಿ ಸಂಪುಟ: ಯುಪಿ, ಬಿಹಾರಕ್ಕೆ ಸಂಪುಟ ಬಂಪರ್‌

| Published : Jun 10 2024, 05:21 AM IST

PM Modi oath

ಸಾರಾಂಶ

ನರೇಂದ್ರ ಮೋದಿಯ ಮೂರನೇ ಸಂಪುಟದಲ್ಲಿ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ದೊರೆತಿದೆ. ಉತ್ತರಪ್ರದೇಶಕ್ಕೆ 9 ಮತ್ತು ಬಿಹಾರಕ್ಕೆ 8 ಸಚಿವ ಸ್ಥಾನ ಲಭಿಸಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರಕ್ಕೂ 6 ಸಚಿವ ಸ್ಥಾನ ನೀಡಲಾಗಿದೆ.

ನವದೆಹಲಿ: ನರೇಂದ್ರ ಮೋದಿಯ ಮೂರನೇ ಸಂಪುಟದಲ್ಲಿ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ದೊರೆತಿದೆ. ಉತ್ತರಪ್ರದೇಶಕ್ಕೆ 9 ಮತ್ತು ಬಿಹಾರಕ್ಕೆ 8 ಸಚಿವ ಸ್ಥಾನ ಲಭಿಸಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರಕ್ಕೂ 6 ಸಚಿವ ಸ್ಥಾನ ನೀಡಲಾಗಿದೆ.

ಹಾಗೆಯೇ ಗುಜರಾತ್‌ ಮತ್ತು ಬಿಹಾರಕ್ಕೆ ಗರಿಷ್ಠ 4 ಕ್ಯಾಬಿನೆಟ್‌ ಸಚಿವ ಸ್ಥಾನ ದೊರೆತಿದ್ದು, ಉತ್ತರಪ್ರದೇಶದಲ್ಲಿ ಕೇವಲ ರಾಜನಾಥ್‌ ಸಿಂಗ್‌ ಅವರಿಗೆ ಮಾತ್ರ ಕ್ಯಾಬಿನೆಟ್‌ ಸಚಿವ ಸ್ಥಾನಮಾನ ದೊರೆತಿದೆ. ಇನ್ನುಳಿದಂತೆ ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನದಿಂದ 5 ಮಂದಿ ಸಚಿವರಾಗಿದ್ದರೆ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕಕ್ಕೆ 4, ತಮಿಳುನಾಡಿನಿಂದ 3, ಒಡಿಶಾ ಮತ್ತು ಕೇರಳದಿಂದ ತಲಾ 2 ಸಚಿವರಾಗಿದ್ದಾರೆ.

ಅಲ್ಪಸಂಖ್ಯಾತರಿಗೆ ಸ್ಥಾನ, ಮುಸ್ಲಿಮರಿಗಿಲ್ಲ

ನವದೆಹಲಿ: ಭಾನುವಾರ ಕೇಂದ್ರ ಸಂಪುಟ ಸೇರಿದ 72 ಸಚಿವರಲ್ಲಿ ವಿವಿಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 5 ಜನರು ಸೇರಿದ್ದಾರೆ. 

ಆದರೆ ಯಾವುದೇ ಮುಸ್ಲಿಮರು ಸಂಪುಟದಲ್ಲಿ ಸ್ಥಾನ ಪಡೆದಿಲ್ಲ. ಈ ಬಾರಿ ಚುನಾವಣೆಯುದ್ದಕ್ಕೂ ಕಾಂಗ್ರೆಸ್‌ನ ಮುಸ್ಲಿಂ ಓಲೈಕೆ ರಾಜಕಾರಣದ ವಿರುದ್ಧ ಬಿಜೆಪಿ ಸತತ ವಾಗ್ದಾಳಿ ನಡೆಸಿತ್ತು ಎಂಬುದು ವಿಶೇಷ. 2019ರಲ್ಲಿ ಮೋದಿ ಸಂಪುಟದಲ್ಲಿ ಮುಖ್ತಾರ್‌ ಅಬ್ಬಾಸ್‌ ನಖ್ವಿ ಸಚಿವ ಸ್ಥಾನ ಪಡೆದುಕೊಂಡಿದ್ದರು.