ಸಾರಾಂಶ
ಇಂಡಿಯಾ ಬ್ಲಾಕ್ ಸರ್ಕಾರ ರಚಿಸಿದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ
ತಿರುವನಂತಪುರಂ: ಕೇಂದ್ರದಲ್ಲಿ ಇಂಡಿಯಾ ಬ್ಲಾಕ್ ಸರ್ಕಾರ ರಚಿಸಿದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಭಾನುವಾರ ಹೇಳಿದ್ದಾರೆ.
ಸಿಎಎಯನ್ನು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸದಿದ್ದರೂ ಅದನ್ನು ರದ್ದುಗೊಳಿಸುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ಪ್ರಣಾಳಿಕೆ ತುಂಬಾ ಸುದೀರ್ಘವಾಗಿದ್ದ ಕಾರಣ ಅದನ್ನು ಉಲ್ಲೇಖಿಸಿರಲಿಲ್ಲ ಎಂದು ಚಿದಂಬರಂ ಹೇಳಿದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಿಪಿಎಂ ನಿರಂತರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಅದರ ಪ್ರಣಾಳಿಕೆಯು ಸಿಎಎಯನ್ನು ಉಲ್ಲೇಖಿಸಲು ವಿಫಲವಾಗಿದೆ ಎಂದು ಹೇಳಿದ್ದರು. ಅದಕ್ಕೆ ಚಿದು ಈ ರೀತಿ ಉತ್ತರಿಸಿದರು.