ಸಾರಾಂಶ
‘ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದರೆ ನಾಯಕತ್ವ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನರಾಚನೆಯಾದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.
ಬೆಂಗಳೂರು : ‘ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದರೆ ನಾಯಕತ್ವ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನರಾಚನೆಯಾದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.
ಸಂಪುಟ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆಯೇ ಗೃಹ ಸಚಿವರ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆಗೆ ಹೈಕಮಾಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹಾಗಾದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.
ಸಂಪುಟ ಪುನಾರಚನೆಯಾದರೆ ಒಳ್ಳೆಯದು
ಸಂಪುಟ ಪುನಾರಚನೆಯಾದರೆ ಒಳ್ಳೆಯದು. ಬಹಳ ದಿನಗಳಿಂದ ಈ ಕುರಿತು ಶಾಸಕರ ಬೇಡಿಕೆ ಇದೆ. ಹಲವರಿಗೆ ಸಚಿವರಾಗಬೇಕು ಎಂಬ ಆಪೇಕ್ಷೆ ಇದೆ. ಸಂಪುಟ ಪುನಾರಚನೆಗೆ ಅವಕಾಶ ನೀಡಿದ್ದಾರೆಂದರೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೀವೇ ಊಹೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ದೆಹಲಿಗೆ ಹೋಗುವಾಗ ನಾನು ಅವರನ್ನು ಭೇಟಿ ಮಾಡಿದ್ದೆ. ಸಂಪುಟ ಪುನಾರಚನೆಯೇ ಆಗಲಿ ಅಥವಾ ಬೇರಿನ್ಯಾವುದೇ ಆಗಿರಲಿ ಎಲ್ಲವೂ ಮುಖ್ಯಮಂತ್ರಿಗಳು, ಹೈಕಮಾಂಡ್‌ಗೆ ಗೊತ್ತಿರುತ್ತದೆ ಎಂದರು.
;Resize=(690,390))
)
;Resize=(128,128))
;Resize=(128,128))
;Resize=(128,128))
;Resize=(128,128))