ಜೆಡಿಎಸ್‌ ಜತೆ ಚರ್ಚಿಸಿ ಚನ್ನಪಟ್ಟಣಕ್ಕೆ ಅಭ್ಯರ್ಥಿ ನಿರ್ಧಾರ: ವಿಜಯೇಂದ್ರ

| Published : Jun 22 2024, 10:22 AM IST

BY Vijayendra

ಸಾರಾಂಶ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಾವು ಮತ್ತು ಜೆಡಿಎಸ್ ನಾಯಕರು ಶೀಘ್ರದಲ್ಲೇ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು :  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಾವು ಮತ್ತು ಜೆಡಿಎಸ್ ನಾಯಕರು ಶೀಘ್ರದಲ್ಲೇ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಕನಕಪುರದಿಂದ ಶಾಸಕರಾಗಿದ್ದರೂ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ, ಜನರ ಮನದಾಳದಲ್ಲಿ ಏನಿದೆ ಎಂಬುದು ನಿಗೂಢವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಅಸಾಧ್ಯ ಎಂದು ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಅಂದುಕೊಂಡಿದ್ದರು. ಆದರೆ, ಮತದಾರರ ತೀರ್ಪನ್ನು ತಾವೆಲ್ಲರೂ ನೋಡಿದ್ದೀರಿ. ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರಾಗಿ ಕುಮಾರಸ್ವಾಮಿಯವರು ಅಭಿವೃದ್ಧಿ ಮಾಡಿದ್ದಾರೆ ಹಾಗೂ ಸೇವೆ ಮಾಡಿದ್ದಾರೆ. ಅವರು ಸಂಸದರಾಗಿ ದೆಹಲಿಗೆ ಹೋದ ಕಾರಣ ಉಪಚುನಾವಣೆ ನಡೆಯುತ್ತಿದೆ. ನಮ್ಮ ಅಭ್ಯರ್ಥಿ ಯಾರೆಂಬ ಬಗ್ಗೆ ನಾವು ಮತ್ತು ಜೆಡಿಎಸ್ ಪಕ್ಷದವರು ಜತೆಗೂಡಿ ನಿರ್ಧರಿಸುತ್ತೇವೆ ಎಂದು ಹೇಳಿದರು.