ಸಚಿವೆ ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ; ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರ ಅಡಚಣೆ ಆರೋಪ

| Published : Mar 22 2024, 02:22 AM IST / Updated: Mar 22 2024, 09:04 AM IST

Shobha Karandlaje
ಸಚಿವೆ ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ; ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರ ಅಡಚಣೆ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇತ್ತೀಚೆಗೆ ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೊಬೈಲ್‌ ಅಂಗಡಿ ಮಾಲೀಕ ಮುಖೇಶ್‌ ಭಜನೆ ಹಾಕಿದ ಕಾರಣಕ್ಕೆ ಪುಂಡರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದ ಘಟನೆ ಖಂಡಿಸಿ ಮಾ.19ರಂದು ನಗರ್ತಪೇಟೆಯ ಸಿದ್ದಣ್ಣಗಲ್ಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. 

ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ನೂರಾರು ಕಾರ್ಯಕರ್ತರ ಜತೆಗೆ ಪ್ರತಿಭಟನೆ ಮಾಡಲಾಗಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಆದೇಶದ ಅನ್ವಯ ನಗರದಲ್ಲಿ ಸ್ವಾತಂತ್ರ್ಯ ಉದ್ಯಾನ ಹೊರತು ಪಡಿಸಿ ಬೇರೆ ಕಡೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. 

ಹೀಗಾಗಿ ಸರ್ಕಾರದ ಸುತ್ತೋಲೆ ಉಲ್ಲಂಘನೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ ಆರೋಪದಡಿ ಹಲಸೂರು ಗೇಟ್‌ ಠಾಣೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.