ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌

| N/A | Published : Sep 29 2025, 04:44 AM IST

DK Shivakumar on maddur Ganesh
ಗ್ಯಾರಂಟಿ ನಿಲ್ಲಿಸಲು ಆರ್ಥಿಕ ಸಮೀಕ್ಷೆ ಮಾಡುತ್ತಿಲ್ಲ: ಡಿ.ಕೆ.ಶಿವಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

  ಬೆಂಗಳೂರು :  ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದೇ ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿ ಯೋಜನೆಗಳನ್ನು ಯಾರೂ ಸಹ ನಿಲ್ಲಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲೂ ಗ್ಯಾರಂಟಿ ಯೋಜನೆಗಳು ನಿಲ್ಲದು. ಕರ್ನಾಟಕದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಗ್ಯಾರಂಟಿ ಯೋಜನೆಗಳು ನಿಲ್ಲಿಸಲು ಆಗುವುದಿಲ್ಲ. ಗ್ಯಾರಂಟಿ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಬದುಕನ್ನು ಕಟ್ಟಿಕೊಡುತ್ತಿದೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಇಡೀ ಭಾರತ ದೇಶಕ್ಕೇ ಗ್ಯಾರಂಟಿಯಿದ್ದಂತೆ ಎಂದು ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

‘ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ

ಇಲ್ಲ, ಅದಕ್ಕೇ ಗಣತಿಗೆ ವಿರೋಧ’ 

ಕೊಪ್ಪಳ :  ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಅನ್ನೋದಕ್ಕೆ ಇದು ಮೊದಲ ಉದಾಹರಣೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡೋವಾಗ ನಾನು ಭಾಗಿಯಾಗಲ್ಲ ಅನ್ನೋಕಾಗುತ್ತಾ? ಎಂದು ಸಚಿವ ಶಿವರಾಜ ತಂಗಡಗಿ ಅವರು ಗಣತಿಗೆ ಮಾಹಿತಿ ನೀಡಲ್ಲ ಎಂದ ಜೋಶಿ ಅವರಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ, ಸಮೀಕ್ಷೆಯಲ್ಲಿ ಎರಡು ತೊಂದರೆಯಾಗಿತ್ತು. ಸಿಎಂ ಜತೆಗೆ ಜಿಲ್ಲಾಧಿಕಾರಿಗಳ ಸಭೆಯ ನಂತರ ಸರಿಪಡಿಸಲಾಗಿದೆ. ಈಗಾಗಲೇ 56 ಲಕ್ಷ ಜನರ ಸಮೀಕ್ಷೆ ಮಾಡಲಾಗಿದೆ. ಕೇಂದ್ರ ಸಚಿವ ಜೋಶಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅವರು ಏನೇನೋ ಹೇಳಿಕೆ ನೀಡಿದ್ದಾರೆ. 9 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಮೀಕ್ಷೆಯಲ್ಲಿ ಭಾಗಿಯಾಗಿವೆ. ಸಮೀಕ್ಷೆಗೆ ಪ್ರಲ್ಹಾದ್ ಜೋಶಿಯವರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಅನ್ನೋದಕ್ಕೆ ಮೊದಲ ಉದಾಹರಣೆ ಜೋಶಿಯವರೇ. ಹೈಕೋರ್ಟ್‌ ಹೇಳಿದ ಮೇಲೆ ಸಮೀಕ್ಷೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡೋವಾಗ ನಾನು ಭಾಗಿಯಾಗಲ್ಲ ಅನ್ನೋಕಾಗತ್ತಾ? ಪ್ರಹ್ಲಾದ್ ಜೋಶಿಯವರು ಸಣ್ಣತನ ಪ್ರದರ್ಶನ ಮಾಡಿದಂತಾಗುತ್ತದೆ ಎಂದರು.

 

Read more Articles on