ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆ ಖರೀದಿಗೆ ಅನುಮತಿ ನೀಡಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನಫೆಡ್ ಮತ್ತು ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ.
ನವದೆಹಲಿ : ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆ ಖರೀದಿಗೆ ಅನುಮತಿ ನೀಡಿದೆ.
90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನಫೆಡ್ (ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ) ಮತ್ತು ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ.
ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟದಲ್ಲಿ
ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಈ ಕೂಡಲೇ ಬೆಂಬಲ ಬೆಲೆ ಯೋಜನೆಯಲ್ಲಿ ತೊಗರಿ ಖರೀದಿಗೆ ಮುಂದಾಗುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೃಷಿ ಸಚಿವರು, ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ತೊಗರಿಬೆಳೆ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದಾರೆ.
ಖರೀದಿ ಪ್ರಾರಂಭದ ದಿನಾಂಕದಿಂದ 90 ದಿನಗಳವರೆಗೆ ರಾಜ್ಯದಲ್ಲಿ ಪಿಎಸ್‌ಎಸ್ (ಕನಿಷ್ಠ ಬೆಂಬಲ ಬೆಲೆ) ಅಡಿ ಒಟ್ಟು 9.67 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆ ಖರೀದಿಸಲಾಗುವುದು. 2025-26ಕ್ಕೆ ತೊಗರಿ ಬೆಳೆಗೆ ಘೋಷಿಸಲಾದ ಎಂಎಸ್‌ಪಿ ಕ್ವಿಂಟಾಲ್‌ಗೆ 8,000ರು. ಆಗಿದೆ.
