ಕೇಂದ್ರದ ರಾಜಕಾರಣ ಮುಗಿದ ಮೇಲೆ ಸಹಜವಾಗಿ ನಾನು ರಾಜ್ಯ ರಾಜಕಾರಣಕ್ಕೆ ಬಂದಿದ್ದು, ಚಾಮರಾಜ ಕ್ಷೇತ್ರವನ್ನು ನನ್ನ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ಮೈಸೂರು : ಕೇಂದ್ರದ ರಾಜಕಾರಣ ಮುಗಿದ ಮೇಲೆ ಸಹಜವಾಗಿ ನಾನು ರಾಜ್ಯ ರಾಜಕಾರಣಕ್ಕೆ ಬಂದಿದ್ದು, ಚಾಮರಾಜ ಕ್ಷೇತ್ರವನ್ನು ನನ್ನ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ಎಲ್ಲಾ ದೃಷ್ಟಿಯಿಂದಲೂ ಚಾಮರಾಜನಗರ ಕ್ಷೇತ್ರ ನನಗೆ ಅನುಕೂಲ

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ದೃಷ್ಟಿಯಿಂದಲೂ ಚಾಮರಾಜನಗರ ಕ್ಷೇತ್ರ ನನಗೆ ಅನುಕೂಲಕರವಾಗಿದೆ. ಹೀಗಾಗಿ ನಾನು ಆಯ್ಕೆ ಮಾಡಿಕೊಂಡಿದ್ದೇನೆ. ಈ ಹಿಂದೆ ಶಂಕರಲಿಂಗೇಗೌಡರು ನಾಲ್ಕು ಬಾರಿ ಚಾಮರಾಜ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದಿದ್ದಾರೆ. ಇದು ಬಿಜೆಪಿ ಕ್ಷೇತ್ರ. ಹೀಗಾಗಿ ಇಲ್ಲಿಂದಲೇ ಚಟುವಟಿಕೆ ಆರಂಭಿಸಿದ್ದೇನೆ ಎಂದರು.

ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ

ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಬರಿ ಒಕ್ಕಲಿಗ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರು ಇದ್ದಾರೆ. ಪ್ರಜ್ಞಾವಂತರು ಮತ್ತು ಬುದ್ಧಿವಂತರಿದ್ದಾರೆ. ಹೀಗಾಗಿ ಸಹಜವಾಗಿ ನನ್ನ ಆಯ್ಕೆಯಾಗಿದೆ ಎಂದು ಅವರು ಹೇಳಿದರು.