ಯಾವ ಜಿಲ್ಲೆಯ ಹಿರಿಯ ಶಾಸಕರಿಗೆ ಅವಕಾಶ ಇದೆಯೋ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಹೈಕಮಾಂಡ್‌ಗೆ ಮನವಿ ಮಾಡಲು ಬಂದಿದ್ದೇವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಯಾವ ಜಿಲ್ಲೆಯ ಹಿರಿಯ ಶಾಸಕರಿಗೆ ಅವಕಾಶ ಇದೆಯೋ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಹೈಕಮಾಂಡ್‌ಗೆ ಮನವಿ ಮಾಡಲು ಬಂದಿದ್ದೇವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಪ್ರತಿಕ್ರಿಯಿಸಿದ್ದಾರೆ.

ಮೂವತ್ತು ಶಾಸಕರು ದೆಹಲಿಗೆ

ದೆಹಲಿಯಲ್ಲಿ ಮಾತನಾಡಿದ ಅವರು, ಹಿರಿಯ ಮೂವತ್ತು ಶಾಸಕರು ದೆಹಲಿಗೆ ಬಂದಿದ್ದೇವೆ. ಬೆಂಗಳೂರಿನಲ್ಲಿ ಎರಡು ಸಭೆ ಮಾಡಿ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ಎರಡೂವರೆ ವರ್ಷ ಆದ್ಮೇಲೆ ಸಚಿವ ಸಂಪುಟ ಪುನರ್ ರಚನೆ ಮಾಡಬೇಕು ಎಂದು ಹೇಳಿದ್ದೇವೆ. ಇದನ್ನು ಹೈಕಮಾಂಡ್‌ಗೂ ಮನವರಿಕೆ ಮಾಡಲು ಬಂದಿದ್ದೇವೆ. ನಾಳೆ, ನಾಡಿದ್ದು ವರಿಷ್ಠರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದರು.

ಎರಡು ದಿನ ದೆಹಲಿಯಲ್ಲಿ

ಎರಡು ದಿನ ದೆಹಲಿಯಲ್ಲಿ ಇರುತ್ತೇವೆ. ಯಾವ ಜಿಲ್ಲೆಯಲ್ಲಿ ಹಿರಿಯ ಶಾಸಕರಿಗೆ ಅವಕಾಶ ಇದೆ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಹೇಳುತ್ತೇವೆ.