-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸಭೆ । ಜನ‌, ಜಾನುವಾರುಗಳಿಗೆ ಕುಡಿವ ನೀರು, ಮೇವು ವಿವಿಧ ವಿಷಯಗಳ ಕುರಿತು ಚರ್ಚೆ

----

ಕನ್ನಡಪ್ರಭ ವಾರ್ತೆ ಕಲಬುರಗಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಕಲಬುರಗಿ ವಿಭಾಗದ ಬರ ಪರಿಸ್ಥಿತಿ ಅವಲೋಕನ ಸಭೆಯಲ್ಲಿ ಜನ‌ ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸೇರಿದಂತೆ ವಿವಿಧ ವಿಷಯಗಳ ಕುರಿತು ಸದೀರ್ಘವಾಗಿ ಚರ್ಚೆ ನಡೆಯಿತು.

ರಾಜ್ಯದ ಉಪಮುಖ್ಯಮಂತ್ರಿ, ಕಂದಾಯ ಮತ್ತು ಯುವಜನ ಸಬಲೀಕರಣ‌ ಮತ್ತು ಕ್ರೀಡಾ ಸಚಿವ ಡಾ.ಜಿ.ರಮೇಶ್ವರ, ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಎಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ,‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಈಶ್ವರ ಖಂಡ್ರೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಅರ್ಥಿಕ‌ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ದಿ ಆಯುಕ್ತರು ಉಮಾ‌ ಮಹಾದೇವನ್, ಇಂಧನ ಇಲಾಖೆಯ ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಪ್ರಜಾ ಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಸೇರಿದಂತೆ ಪ್ರದೇಶದ ಏಳು ಜಿಲ್ಲೆಗಳ ಸಂಸದರು, ಶಾಸಕರು, ಬರ ಸಂಬಂಧಿತ ವಿವಿಧ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಲಬುರಗಿ ವಿಭಾಗದ ಡಿ.ಸಿ., ಜಿಲ್ಲಾ ಪಂಚಾಯಿತಿ ಸಿಇಒಗಳು, ಕೃಷಿ ತೋಟಗಾರಿಕೆ, ಪಶುಸಂಗೋಪನೆ, ನೀರಾವರಿ ಸೇರಿದಂತೆ ವಿವಿಧ ಇಲಾಖೆಯ ವಿಭಾಗ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸಿಮ್‌ ಸ್ವಾಗತಿಸಿದರು.

ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕಾರ್ಯದರ್ಶಿ ಮನೋಜಕುಮಾರ ಮೀನಾ ಅವರು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬರ ಪರಿಸ್ಥಿತಿ ಕುರಿತು ಅಂಕಿ ಸಂಖ್ಯೆಯನ್ನು ಸಭೆಗೆ ವಿವರಿಸಿದರು.