ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಬುಲಾವ್ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.
- ಡಿ.18ರಿಂದ 20ರವರೆಗೆ ಕೇಂದ್ರ ನಾಯಕರ ಜತೆ ಸಭೆ
- ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಬಗ್ಗೆ ಚರ್ಚೆಕನ್ನಡಪ್ರಭ ವಾರ್ತೆ ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಬುಲಾವ್ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಎಸ್. ಸುರೇಶ್ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.ಈ ಕುರಿತು ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರು ಸಿಎಂ, ಡಿಸಿಎಂ ಹಾಗೂ ಕೆಲ ಸಚಿವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಿ. 18ರಂದು ದೆಹಲಿಗೆ ತೆರಳಲಿರುವ ನಾಯಕರು, ಡಿ. 20ರವರೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ. 21ರಂದು ಎಲ್ಲ ನಾಯಕರು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏನು ಚರ್ಚೆ?:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರೊಂದಿಗೆ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೂರು ದಿನಗಲ ಕಾಲ ಚರ್ಚೆ ನಡೆಯಲಿದೆ. ಈ ವೇಳೆ ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ, ಅದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗುವ ಲಾಭದ ಬಗ್ಗೆಯೂ ಸಮಾಲೋಚಿಸಲಾಗುತ್ತದೆ. ಹಾಗೆಯೇ, ಗ್ಯಾರಂಟಿ ಯೋಜನೆಗಳ ಜಾರಿ, ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಾಗಿರುವ ಬದಲಾವಣೆ ಬಗ್ಗೆಯೂ ಕೇಂದ್ರ ನಾಯಕರು ವರದಿ ಪಡೆಯುವ ಸಾಧ್ಯತೆಗಳಿವೆ.