ದಿಲ್ಲಿ ಕೈಕಮಾಂಡ್‌ ಭೇಟಿ ಮಾಡಿದ ಸಿದ್ದು, ಡಿಕೆಶಿ

| N/A | Published : Jul 11 2025, 11:53 AM IST

DK Shivakumar supports Siddaramaiah, says will go by party decision

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 ನವದೆಹಲಿ :  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ವೇಳೆ ವಿವಿಧ ನಿಗಮಗಳು, ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಸುರ್ಜೇವಾಲಾ ಮತ್ತು ಖರ್ಗೆ ಅವರನ್ನು ಭೇಟಿಯಾಗಿ ಹೊರಬಂದ ಬಳಿಕ ಸಿಎಂ ಆಗಲಿ, ಡಿಸಿಎಂ ಆಗಲಿ ಮಾಧ್ಯಮದವರೊಂದಿಗೆ ಮಾತನಾಡಲಿಲ್ಲ.

ನಿಗಮ-ಮಂಡಳಿ ಆಕಾಂಕ್ಷಿಗಳ ಪಟ್ಟಿ ಚರ್ಚೆ ಪೂರ್ಣಗೊಂಡಿದ್ದು, ಅಂತಿಮ ತೀರ್ಮಾನ ಬಾಕಿ ಇದೆ. ಮುಂದಿನ ವಾರ ಸುರ್ಜೇವಾಲಾ ಬೆಂಗಳೂರಿಗೆ ಬಂದಾಗ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಡಿ.ಕೆ.ಶಿವಕುಮಾರ್‌ ಇಡೀ ದಿನ ಮೌನಕ್ಕೆ ಜಾರಿದ್ದರು. ಸಿಎಂ 5 ವರ್ಷಗಳ ಹೇಳಿಕೆಯ ಬಳಿಕ ಅವರು ಪ್ರತಿಕ್ರಿಯೆಗೆ ಸಿಗಲಿಲ್ಲ. ಇದೇ ವೇಳೆ ಗುರುವಾರ ಸಂಜೆ, ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು.

Read more Articles on