ಸಾರಾಂಶ
ಕೋಲಾರ : ಜಿಲ್ಲಾದ್ಯಂತ ಇರುವ ಕೈಗಾರಿಕೆಗಳ ಸಿಎಸ್‌ಆರ್ ನಿಧಿಯನ್ನು ಎರಡು ವರ್ಷಗಳ ಕಾಲ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಬಳಸಲು ನಿರ್ಧರಿಸಿದ್ದೇವೆ, ಇದರ ಜತೆಗೆ ಒಪಿಎಸ್ ಹಾಗೂ ೭ನೇ ವೇತನ ಆಯೋಗ ಜಾರಿಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ರನ್ನು ಗೆಲ್ಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಮನವಿ ಮಾಡಿದರು.
ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲೆಯಲ್ಲಿ ಡಿ ಟಿ ಶ್ರೀನಿವಾಸ್ ಪರ ಶಿಕ್ಷಕರ ಮತಯಾಚಿಸಿದ ಅವರು, ಸಿಎಸ್‌ಆರ್ ನಿಧಿಯನ್ನು ಶಾಲೆಗಳಲ್ಲಿ ಶೌಚಾಲಯ, ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಬಳಸಲು ಸೂಚಿಸಲಾಗಿದೆ ಎಂದರು.ಹಳೆ ಪಿಂಚಣಿ ಯೋಜನಗೆ ಬದ್ಧ
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬದ್ಧವಾಗಿದೆ, ೭ನೇ ವೇತನ ಆಯೋಗದ ವರದಿಯೂ ಸರ್ಕಾರದ ಕೈಸೇರಿದ್ದು ಅದೂ ಜಾರಿಯಾಗಲಿದೆ ಎಂದ ಅವರು, ಈ ಕುರಿತು ಚುನಾವಣಾ ನೀತಿ ಸಂಹಿತೆ ಇರುವುದರಿಂದ ಅಧಿಕೃತವಾಗಿ ಪ್ರಕಟಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಮತಗಳು ತಿರಸ್ಕೃತವಾಗದಿರಲಿ
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಕರ ಕ್ಷೇತ್ರದ ಕಳೆದ ಚುನಾವಣೆಯಲ್ಲಿ ೬ ಸಾವಿರ ಮತಗಳು ತಿರಸ್ಕೃತಗೊಂಡಿದ್ದವು, ಈ ಬಾರಿ ಎಚ್ಚರಿಕೆಯಿಂದ ಮತದಾನ ಮಾಡಬೇಕು. ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹಾರ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ನರಸಾಪುರ ಎಸ್‌ಎಫ್‌ಸಿಎಸ್ ಅಧ್ಯಕ್ಷ ಮುನಿರಾಜು, ಗ್ರಾ.ಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಗ್ರಾ.ಪಂ ಮಾಜಿ ಸದಸ್ಯ ಎ.ಶ್ರೀಧರ್, ಮಾಜಿ ಉಪಾಧ್ಯಕ್ಷ ವೈ.ಮುನಿಯಪ್ಪ, ಮುಖಂಡರಾದ ಗಜೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ದಾಸಪ್ಪ, ಮುಖಂಡರಾದ ರವೀಂದ್ರನಾಥ್, ಜರಾಲ್ಡ್, ಮತ್ತಿತರರಿದ್ದರು.