ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಾಮನ್ವೆಲ್ತ್ ಮಹಿಳಾ ಸಂಸದೆಯರ ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನವನ್ನು ಮಂಗಳವಾರ ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರು ಉದ್ಘಾಟನೆ ಮಾಡಲಿದ್ದಾರೆ.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಾಮನ್ವೆಲ್ತ್ ಮಹಿಳಾ ಸಂಸದೆಯರ ಭಾರತ ಪ್ರಾದೇಶಿಕ ಘಟಕದ ವಿಶೇಷ ಸಮ್ಮೇಳನವನ್ನು ಮಂಗಳವಾರ ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರು ಉದ್ಘಾಟನೆ ಮಾಡಲಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ಭಾರತ ಸಂಸತ್ತು ಹಾಗೂ ಕರ್ನಾಟಕ ವಿಧಾನಮಂಡಲದ ಸಹಯೋಗದಲ್ಲಿ ಆಯೋಜಿಸಲಾಗಿದೆ.
150 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ
ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಹಿಳಾ ಸಂಸದರು, ಮಹಿಳಾ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಶಾಸಕಿಯರು, ವಿಧಾನಪರಿಷತ್ ಸದಸ್ಯರು ಸೇರಿ ಸುಮಾರು 150 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕಾಮನ್ವೆಲ್ತ್ ಸಂಸದೀಯ ಸಂಘದ 9 ರಾಷ್ಟ್ರಗಳ ಪ್ರತಿನಿಧಿಗಳೂ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಲೀಂ ಅಹ್ಮದ್ ಅವರು, ಬೆಳಗ್ಗೆ 11 ಗಂಟೆಗೆ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಜತೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಅಧ್ಯಕ್ಷೆ ಡಾ.ಡಿ.ಪುರಂದೇಶ್ವರಿ ಜಂಟಿಯಾಗಿ ಉದ್ಘಾಟಿಸಲಿದ್ದಾರೆ.
ರಾಜ್ಯಸಭೆ ಉಪಸಭಾಪತಿ ಹರಿವಂಶ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ರಾಜ್ಯಪಾಲರಾದ ಸುಧಾ ಯಾದವ್ ಅವರು, ಉಪಸಭಾಪತಿಗಳು, ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು ಸೇರಿ ಸಚಿವರು, ಪ್ರತಿಪಕ್ಷ ನಾಯಕರು ಹಾಗೂ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರತಿ ರಾಜ್ಯದಿಂದ 4 ಮಂದಿ ಮಹಿಳಾ ಪ್ರತಿನಿಧಿಗಳನ್ನು ಕಳುಹಿಸಿಕೊಡಲು ಸೂಚಿಸಿದ್ದು, 150 ಮಂದಿ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಮಹಿಳಾ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಲಿದ್ದು, ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಅವರು ವಂದನಾ ನಿರ್ಣಯ ಮಾಡಲಿದ್ದಾರೆ ಎಂದು ತಿಳಿಸಿದರು.
ಸೈಬರ್ ಸುರಕ್ಷತೆ, ಮಾರ್ಗದರ್ಶನಕ್ಕೆ ಒತ್ತು:
ನೂತನ ಮಹಿಳಾ ಜನಪ್ರತಿನಿಧಿಗಳಿಗೆ ಸೈಬರ್ ಸುರಕ್ಷತೆ ಮತ್ತು ಮಾರ್ಗದರ್ಶನದ ಹಾದಿಗಳು’ ಎಂಬ ಪ್ರಮುಖ ಆಶಯದಡಿ ಸಮ್ಮೇಳನ ನಡೆಯಲಿದೆ.
ಮಹಿಳೆಯರ ಡಿಜಿಟಲ್ ಸಬಲೀಕರಣ, ಸೈಬರ್ ಸುರಕ್ಷತೆ, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಕಿರುಕುಳ, ಕೃತಕ ಬುದ್ಧಿಮತ್ತೆ (ಎಐ), ಡೀಪ್ಫೇಕ್ ತಂತ್ರಜ್ಞಾನದಿಂದ ಎದುರಾಗುತ್ತಿರುವ ಸವಾಲುಗಳು ಹಾಗೂ ಡಿಜಿಟಲ್ ಜಗತ್ತಿನಲ್ಲಿ ಮಹಿಳಾ ಜನಪ್ರತಿನಿಧಿಗಳ ವೈಯಕ್ತಿಕ ಮಾಹಿತಿ ಮತ್ತು ಗೌಪ್ಯತೆ ರಕ್ಷಣೆ ಕುರಿತು ವಿಚಾರ ವಿನಿಮಯ ನಡೆಯಲಿದೆ.
- ಮೊದಲ ಭಾರಿಗೆ ಭಾರತದಲ್ಲಿ ಆಯೋಜನೆ
ಇತ್ತೀಚೆಗೆ ನಿಗಮ ಮಂಡಳಿಗಳಿಗೆ ಹೊಸ ಸದಸ್ಯರ ನೇಮಿಸಿದ್ದ ಸರ್ಕಾರ
ಬೆಂಗಳೂರಿನಲ್ಲಿ ಕಾಮನ್ವೆಲ್ತ್ ದೇಶಗಳ ಸಂಸದೆಯರ ಸಮ್ಮೇಳನ
ಇದೇ ಮೊದಲ ಬಾರಿಗೆ ಭಾರತದಲ್ಲಿ ಇಂಥ ಕಾರ್ಯಕ್ರಮ ಆಯೋಜನೆ
2 ದಿನಗಳ ಸಮ್ಮೇಳನದಲ್ಲಿ 9 ವಿವಿಧ ದೇಶಗಳ 150 ಪ್ರತಿನಿಧಿಗಳು ಭಾಗಿ
ಮಹಿಳೆಯರ ಡಿಜಿಟಲ್ ಸಬಲೀಕರಣ, ಸೈಬರ್ ಸುರಕ್ಷತೆ ಮತ್ತಿತರೆ ವಿಷಯ ಚರ್ಚೆ
