ಸಾರಾಂಶ
ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.
ಮಂಡ್ಯ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ್ದ ಶಾಸಕ ನರೇಂದ್ರಸ್ವಾಮಿ, ‘ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಠ್ಠಾಳ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗುವುದಕ್ಕೆ ನೀನು ನಾಲಾಯಕ್’ ಎಂದು ರಾಜ್ಯಪಾಲರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸಿ.ಟಿ.ಮಂಜುನಾಥ್ ನೇತೃತ್ವದಲ್ಲಿ ದೂರು ನೀಡಲಾಯಿತು.