ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಏನೇ ಆದರೂ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಮೈಸೂರು : ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸ ಇದೆ. ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತಂತೆ ಸ್ವಪಕ್ಷ ಮತ್ತು ವಿಪಕ್ಷ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿಯೇ ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೇ ಆದರೂ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಸುದೀರ್ಘ ಅವಧಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಸಿದ್ದರಾಮಯ್ಯ ಅವರು ಬುಧವಾರ ಬುಧವಾರ ಹೊಸ ದಾಖಲೆ ಬರೆಯಲಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿ, ನನಗೆ ದೇವರಾಜ ಅರಸು ದಾಖಲೆ ಬಗ್ಗೆ ಅರಿವು ಇರಲಿಲ್ಲ. ದಾಖಲೆ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ. ಇವತ್ತು ದೇವರಾಜ ಅರಸು ದಾಖಲೆ ಸರಿಗಟ್ಟಿದ್ದೇನೆ. ದೇವರಾಜ ಅರಸು ರಾಜಕಾರಣದ ಸಮಯವೇ ಬೇರೆ. ಇವತ್ತಿನ ಸಮಯವೇ ಬೇರೆ. ಜನರ ಆಶೀರ್ವಾದದಿಂದ ಅಷ್ಟೇ ನಾನು ಇಲ್ಲಿಯ ತನಕ ಬಂದಿದ್ದೇನೆ. ಇಲ್ಲಿವರೆಗಿನ ರಾಜಕೀಯ ತೃಪ್ತಿ ಕೊಟ್ಟಿದೆ ಎಂದರು.
ಜನರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ. ನಾನು ಒಂದು ಬಾರಿ ಎಂಎಲ್ಎ ಆದರೆ ಸಾಕು ಅಂದುಕೊಂಡಿದ್ದೆ. ಆದರೆ, ಎಂಎಲ್ಎ, ಡಿಸಿಎಂ, ಸಿಎಂ ಎಲ್ಲಾ ಆಗಿದ್ದೇನೆ ಎಂದು ಅವರು ಹೇಳಿದರು.
ನಾಟಿಕೋಳಿ, ರಾಗಿ ಮುದ್ದೆ ಇಷ್ಟ
ರಾಜ್ಯದ ಹಲವಡೆ ಸಿಎಂ ಹೆಸರಿನಲ್ಲಿ ನಾಟಿಕೋಳಿ ಪಲಾವ್ ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಯಾರು ನಾಟಿಕೋಳಿ ಪಲಾವ್ ಹಂಚುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾರ್ಯಾರು ಹಂಚಿದ್ದಾರೆ ನನ್ನ ಗಮನದಲ್ಲೂ ಇಲ್ಲ ಬಿಡಿ ಎಂದರು.
ನಾನು ಹಳ್ಳಿಯಿಂದ ಬಂದವನು. ಸಹಜವಾಗಿ ನನಗೆ ನಾಟಿ ಕೋಳಿ, ರಾಗಿ ಮುದ್ದೆ ಇಷ್ಟ. ನನ್ನಂತೆಯೇ ಹಳ್ಳಿಯಿಂದ ಬಂದವರು ನಾಟಿಕೋಳಿ ಊಟ ಇಷ್ಟ ಇರುತ್ತದೆ. ನಾನು ಮೊದಲು ನಾಟಿ ಕೋಳಿ ತಿನ್ನುತ್ತಿದ್ದೆ. ಈಗ ಕಡಿಮೆ ಮಾಡಿದ್ದೇನೆ ಎಂದರು.
ದಾಖಲೆ ಮಾಡಬೇಕು ಎಂದು ಭಾವಿಸಿರಲಿಲ್ಲ
ನನಗೆ ದೇವರಾಜ ಅರಸು ದಾಖಲೆ ಬಗ್ಗೆ ಅರಿವು ಇರಲಿಲ್ಲ. ದಾಖಲೆ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ. ನಾನು ಒಂದು ಬಾರಿ ಎಂಎಲ್ಎ ಆದರೆ ಸಾಕು ಅಂದುಕೊಂಡಿದ್ದೆ. ಆದರೆ, ಎಂಎಲ್ಎ, ಡಿಸಿಎಂ, ಸಿಎಂ ಎಲ್ಲಾ ಆಗಿದ್ದೇನೆ. ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ. ಇಲ್ಲಿವರೆಗಿನ ರಾಜಕೀಯ ತೃಪ್ತಿ ಕೊಟ್ಟಿದೆ. ಜನರಿಗೆ ಇನ್ನಷ್ಟು ಕೆಲಸ ಮಾಡಬೇಕಿದೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ

