ಸಾರಾಂಶ
ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ
ನವದೆಹಲಿ: ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವದ ಕೊಲೆ ಎಂದು ಕಿಡಿ ಕಾರಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಜೇಶ್ ರಾಥೋರ್, ಎನ್‌ಡಿಎ ನೇತೃತ್ವದ ಚುನಾವಣಾ ಅಧಿಕಾರಿಗಳು ಬಿಜೆಪಿ ನಾಯಕರನ್ನು ಅರಾಮಾಗಿ ದೇಶದಾದ್ಯಂತ ತಿರುಗಾಡಲು ಬಿಟ್ಟಿದ್ದು, ವಿರೋಧ ಪಕ್ಷದವರನ್ನು ಗುರಿಯಾಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ನನ್ನು ಪರಿಶೀಲನೆ ನಡೆಸಿದ್ದರು. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ನನ್ನು ಪರಿಶೀಲನೆ ನಡೆಡಿಸಿದ್ದಾರೆ ಎಂದು ಕಿಡಿಕಾರಿದರು.