ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಮುಖ್ಯಮಂತ್ರಿ ಮೋಹನ್‌ ಯಾದವ್‌ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಭೋಪಾಲ್‌: ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕಿ ನಿರ್ಮಲಾ ಸಪ್ರೆ ಅವರು ಭಾನುವಾರ ಮುಖ್ಯಮಂತ್ರಿ ಮೋಹನ್‌ ಯಾದವ್‌ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. 

ನಿರ್ಮಲಾ, ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿ ಬಳಿಕ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಮೂರನೇ ಶಾಸಕರಾಗಿದ್ದಾರೆ. 

ಕಾಂಗ್ರೆಸ್‌ ತತ್ವಹೀನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಬಿಜೆಪಿ ಸೇರಿದ್ದಾಗಿ ಅವರು ಹೇಳಿದ್ದಾರೆ.