ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರವಿಧಾನಸಭೆ ಚುನಾವಣೆ ನಡೆದು 7 ತಿಂಗಳು ಕಳೆದಿದೆ. ಈ ವರೆಗೂ ಕಾಂಗ್ರೆಸ್ ಪಕ್ಷದಿಂದ ಕೃತಜ್ಞತಾ ಸಭೆ ನಡೆಸಿಲ್ಲ ಎಂದು ಮುಖಂಡ ಚಿಕ್ಕಾಡೆ ಕೃಷ್ಣೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅನುಷ್ಠಾನ ಸಮಿತಿ ರಚನೆಗಾಗಿ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಅಧಿಕಾರಕ್ಕೆ ಬಂದು ಇಷ್ಟು ದಿನಗಳಾದರೂ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರ್ಯಕರ್ತರಿಗೆ ನಾಮಿನಿ ಸೇರಿದಂತೆ ಯಾವುದೇ ಅಧಿಕಾರ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರ ಅವಶ್ಯಕತೆ ಬೇಕಿದೆ. ಚುನಾವಣೆ ನಂತರ ಕಡೆಗಣಿಸಲಾಗಿದೆ. ಕೂಡಲೇ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಪಾಂಡವಪುರಕ್ಕೆ ಬಂದಾಗ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಪಕ್ಷ ನಿಷ್ಠೆಯಿಂದ ದುಡಿದವರಿಗೆ ನಾಮ ನಿರ್ದೇಶನ ಸೇರಿದಂತೆ ಹಲವು ಅವಕಾಶಗಳು ದೊರೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಮುಖಂಡರು, ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳು ಜನರಿಗೆ ಪ್ರಾಮಾಣಿಕವಾಗಿ ತಲುಪಿದೆಯೇ, ಇಲ್ಲ ಏನಾದರೂ ಲೋಪದೋಷವಾಗಿದೆಯೇ ಎಂಬುದನ್ನು ಮನೆ ಮನೆಗೆ ತೆರಳಿ ಪರಿಶೀಲಿಸುವ ಉದ್ದೇಶದಿಂದ ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹೋಬಳಿವಾರು ನಿಷ್ಠಾವಂತ ಕಾರ್ಯಕರ್ತರನ್ನು ಸಮಿತಿಗೆ ಗುರುತಿಸಿ ಪಟ್ಟಿ ಸಿದ್ಧಪಡಿಸಿಕೊಡಬೇಕು ಎಂದರು.ಸಭೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಟೌನ್ ಅಧ್ಯಕ್ಷ ಕೆ.ಉಮಾಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಹಾರೋಹಳ್ಳಿ ಡಿ.ಹುಚ್ಚೇಗೌಡ, ಕಾಂಗ್ರೆಸ್ ಮುಖಂಡರಾದ ಸಿದ್ದಲಿಂಗಯ್ಯ, ಎಂ.ಕೆ.ಸತ್ಯೇಂದ್ರಕುಮಾರ್, ಚಿಕ್ಕಬ್ಯಾಡರಹಳ್ಳಿ ಧರ್ಮಣ್ಣ, ಎಚ್.ಎನ್.ದಯಾನಂದ, ಹರಳಹಳ್ಳಿ ದಯಾನಂದ, ಶ್ಯಾದನಹಳ್ಳಿ ನರೇಂದ್ರಬಾಬು, ಮೋಹನ್ ಕುಮಾರ್, ಯೋಗಣ್ಣ, ಮಹ್ಮದ್ ಹನೀಫ್ (ಪಾಪು), ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಎನ್.ಕೃಷ್ಣೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂತನಹಳ್ಳಿ ಬಸವರಾಜು ಇತರರಿದ್ದರು.
)
)
;Resize=(128,128))
;Resize=(128,128))