ಸಾರಾಂಶ
ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಗಳೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕತ್ವ ಸಭೆ ನಡೆಸಿದೆ.
ಬೆಂಗಳೂರು : ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಗಳೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕತ್ವ ಸಭೆ ನಡೆಸಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕಾರ್ಯವನ್ನು ಹೈಕಮಾಂಡ್ ಮಾಡಲಿದ್ದು, ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಪಕ್ಷ ಸೂಚಿಸಿದೆ.
ಉಪಚುನಾವಣೆ ಘೋಷಣೆ ಬೆನ್ನಲ್ಲೇ ಮೂರೂ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದು ಯಾವುದೇ ಅಸಮಾಧಾನ, ಬಂಡಾಯಕ್ಕೆ ಅವಕಾಶವಾಗದಂತೆ ಎಲ್ಲ ಆಕಾಂಕ್ಷಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಯನ್ನು ಅಂತಿಮಗೊಳಿಸುವ ಕೆಲಸಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.
ಈ ನಿಟ್ಟಿನಲ್ಲಿ ಗುರುವಾರ ಮೂರೂ ಕ್ಷೇತ್ರಗಳ ಎಲ್ಲಾ ಪ್ರಮುಖ ಆಕಾಂಕ್ಷಿಗಳನ್ನು ಆಹ್ವಾನಿಸಿ ಅವರೊಂದಿಗೆ ನಗರದಲ್ಲಿ ಸಭೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆಗೆ ಇರುವ ಪಕ್ಷದ ಮಾನದಂಡಗಳನ್ನು ಅನುಸರಿಸಿ ಅಂತಿಮಗೊಳಿಸಲಾಗುತ್ತದೆ. ಆಕಾಂಕ್ಷಿಗಳು ಎಷ್ಟೇ ಜನ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಸ್ಥಳೀಯ ನಾಯಕರ ಅಭಿಪ್ರಾಯ, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ರಾಜ್ಯ ನಾಯಕರ ಅಭಿಪ್ರಾಯ, ಗೆಲ್ಲುವ ಅಭ್ಯರ್ಥಿ ಯಾರೆಂದು ಪಕ್ಷದ ಆಂತರಿಕ ಸಮೀಕ್ಷೆ ಹೀಗೆ ಹಲವು ವಿಚಾರಗಳನ್ನು ಪರಿಗಣಿಸಿ ಅಂತಿಮಗೊಳಿಸಲಾಗುತ್ತದೆ. ಹಾಗಾಗಿ ಯಾರಿಗೇ ಟಿಕೆಟ್ ಸಿಕ್ಕರೂ ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ತನ್ಮೂಲಕ ಮೂರೂ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಗೆಲುವು ತಂದುಕೊಟ್ಟು ಸರ್ಕಾರದ ಶಕ್ತಿ ಹೆಚ್ಚಿಸಲು ಸೂಚಿಸಲಾಗಿದೆ. ಒಂದು ವೇಳೆ ಪಕ್ಷದ ಆಯ್ಕೆಯ ವಿರುದ್ಧ ಯಾರೇ ಬಂಡಾಯ, ಅಸಮಾಧಾನ ವ್ಯಕ್ತಪಡಿಸಿದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಪಕ್ಷದ ನಾಯಕತ್ವ ಆಕಾಂಕ್ಷಿಗಳಿಗೆ ಎಚ್ಚರಿಕೆ ನೀಡಿದೆ ಎಂದು ತಿಳಿ