ಏ.6ಕ್ಕೆ ಜೈಪುರ, ಹೈದ್ರಾಬಾದಲ್ಲಿ ಕಾಂಗ್ರೆಸ್‌ ಮೆಗಾ ರ್‍ಯಾಲಿ

| Published : Apr 02 2024, 01:07 AM IST / Updated: Apr 02 2024, 04:33 AM IST

ಏ.6ಕ್ಕೆ ಜೈಪುರ, ಹೈದ್ರಾಬಾದಲ್ಲಿ ಕಾಂಗ್ರೆಸ್‌ ಮೆಗಾ ರ್‍ಯಾಲಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆ ಅಂಗವಾಗಿ ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾದ ಮಾರನೇ ದಿನವಾದ ಏ.6ರಂದು ಜೈಪುರ ಹಾಗೂ ಹೈದರಾಬಾದ್‌ನಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

ನವದೆಹಲಿ: ಲೋಕಸಭೆ ಚುನಾವಣೆ ಅಂಗವಾಗಿ ಏ.5ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆಯಾದ ಮಾರನೇ ದಿನವಾದ ಏ.6ರಂದು ಜೈಪುರ ಹಾಗೂ ಹೈದರಾಬಾದ್‌ನಲ್ಲಿ ಬೃಹತ್‌ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ. 

ಕಾಂಗ್ರೆಸ್‌ ವಕ್ತಾರ ಕೆ.ಸಿ.ವೇಣುಗೋಪಾಲ್‌ ತಮ್ಮ ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಜೈಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ. ಅದೇ ದಿನ ಹೈದರಾಬಾದ್‌ನಲ್ಲಿ ರಾಹುಲ್‌ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.